AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CSK ಫ್ಯಾನ್ಸ್​ನ ಸೈಲೆಂಟ್ ಮಾಡಿದ್ದೇವೆ... ಕಾವ್ಯ ಮಾರನ್ ವಿಡಿಯೋ ವೈರಲ್

CSK ಫ್ಯಾನ್ಸ್​ನ ಸೈಲೆಂಟ್ ಮಾಡಿದ್ದೇವೆ… ಕಾವ್ಯ ಮಾರನ್ ವಿಡಿಯೋ ವೈರಲ್

ಝಾಹಿರ್ ಯೂಸುಫ್
|

Updated on:Apr 19, 2026 | 10:17 AM

Share

SRH vs CSK: ಈ ಗೆಲುವಿನೊಂದಿಗೆ ಸನ್ ರೈಸರ್ಸ್ ಹೈದರಾಬಾದ್ ತಂಡ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಜಿಗಿದಿದೆ. ಇದುವರೆಗೆ ಆಡಿರುವ 6 ಪಂದ್ಯಗಳಲ್ಲಿ 3 ಗೆಲುವು ದಾಖಲಿಸಿರುವ ಎಸ್‌ಆರ್‌ಎಚ್, ಪ್ಲೇ-ಆಫ್ ರೇಸ್‌ನಲ್ಲಿ ಮುನ್ನಡೆ ಸಾಧಿಸಿದೆ. ಮತ್ತೊಂದೆಡೆ, ಈ ಸೋಲು ಸಿಎಸ್‌ಕೆ ತಂಡಕ್ಕೆ ಭಾರಿ ಹಿನ್ನಡೆ ತಂದಿದ್ದು, ಅಂಕ ಪಟ್ಟಿಯಲ್ಲಿ 7ನೇ ಸ್ಥಾನಕ್ಕೆ ಕುಸಿದಿದೆ.

ಐಪಿಎಲ್ 2026ರ 27ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ (SRH) 10 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ಬೆನ್ನಲ್ಲೇ ಎಸ್‌ಆರ್‌ಎಚ್ ತಂಡದ ಮಾಲೀಕಿ ಕಾವ್ಯಾ ಮಾರನ್ ಅವರ ಸಂಭ್ರಮದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿವೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 194 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 184 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಎಸ್​ಆರ್​ಹೆಚ್ ಪಡೆ 10 ರನ್​ಗಳ ರೋಚಕ ಜಯ ಸಾಧಿಸಿತು.

ಈ ಪಂದ್ಯದುದ್ದಕ್ಕೂ ಗ್ಯಾಲರಿಯಲ್ಲಿ ಕುಳಿತು ತಂಡವನ್ನು ಹುರಿದುಂಬಿಸುತ್ತಿದ್ದ ಎಸ್​ಆರ್​ಹೆಚ್​ ಮಾಲಕಿ ಕಾವ್ಯಾ ಮಾರನ್, ಕೊನೆಯ ಓವರ್‌ನಲ್ಲಿ ಎಸ್‌ಆರ್‌ಎಚ್ ಗೆಲುವು ಖಚಿತವಾಗುತ್ತಿದ್ದಂತೆ ಕುಣಿದು ಕುಪ್ಪಳಿಸಿದರು.

ಗಾಳಿಯಲ್ಲಿ ಕೈಬೀಸುತ್ತಾ, ಚಪ್ಪಾಳೆ ತಟ್ಟುತ್ತಾ ಅವರು ತೋರಿದ ಉತ್ಸಾಹ ಅಭಿಮಾನಿಗಳ ಗಮನ ಸೆಳೆಯಿತು. ಅದರಲ್ಲೂ ಬಾಯಿ ಮೇಲೆ ಬೆರಳಿಟ್ಟು ಸಿಎಸ್​ಕೆ ಅಭಿಮಾನಿಗಳನ್ನು ‘ಸೈಲೆಂಟ್’ ಮಾಡಿದ್ದೇವೆ ಎಂದು ಸನ್ನೆ ಮಾಡಿ ಸಂಭ್ರಮಿಸಿದರು. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇನ್ನು ಈ ಗೆಲುವಿನೊಂದಿಗೆ ಸನ್ ರೈಸರ್ಸ್ ಹೈದರಾಬಾದ್ ತಂಡ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಜಿಗಿದಿದೆ. ಇದುವರೆಗೆ ಆಡಿರುವ 6 ಪಂದ್ಯಗಳಲ್ಲಿ 3 ಗೆಲುವು ದಾಖಲಿಸಿರುವ ಎಸ್‌ಆರ್‌ಎಚ್, ಪ್ಲೇ-ಆಫ್ ರೇಸ್‌ನಲ್ಲಿ ಮುನ್ನಡೆ ಸಾಧಿಸಿದೆ. ಮತ್ತೊಂದೆಡೆ, ಈ ಸೋಲು ಸಿಎಸ್‌ಕೆ ತಂಡಕ್ಕೆ ಭಾರಿ ಹಿನ್ನಡೆ ತಂದಿದ್ದು, ಅಂಕ ಪಟ್ಟಿಯಲ್ಲಿ 7ನೇ ಸ್ಥಾನಕ್ಕೆ ಕುಸಿದಿದೆ.

Published on: Apr 19, 2026 10:16 AM
Follow Us