VIDEO: ಔಟ್ ಮಾಡು… ಔಟ್ ಮಾಡು… ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್

Updated on: May 06, 2025 | 7:54 AM

IPL 2025 SRH vs DC: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 55ನೇ ಪಂದ್ಯವು ಮಳೆಯ ಕಾರಣ ರದ್ದಾಗಿದೆ. ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ದ್ವಿತೀಯ ಇನಿಂಗ್ಸ್ ಆರಂಭಕ್ಕೂ ಮುನ್ನ ಸುರಿದ ಮಳೆಯಿಂದಾಗಿ ಪಂದ್ಯವನ್ನು ರದ್ದುಗೊಳಿಸಲಾಯಿತು.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 55ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ (SRH) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಗಳು ಮುಖಾಮುಖಿಯಾಗಿದ್ದವು. ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 29 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಡೆಲ್ಲಿ ಪಡೆಗೆ ಟ್ರಿಸ್ಟನ್ ಸ್ಟಬ್ಸ್ ಹಾಗೂ ವಿಪ್ರಾಜ್ ನಿಗಮ್ ಆಸರೆಯಾಗಿ ನಿಂತಿದ್ದರು.

ಇದರ ನಡುವೆ 13ನೇ ಓವರ್​ನ ಮೊದಲ ಎಸೆತದಲ್ಲಿ ವಿಪ್ರಾಜ್ ನಿಗಮ್ ಎರಡು ರನ್ ಓಡುವ ಪ್ರಯತ್ನ ಮಾಡಿದ್ದರು. ಆದರೆ ಸ್ಟ್ರೈಕ್​ನಲ್ಲಿದ್ದ ಸ್ಟಬ್ಸ್ ಎರಡನೇ ರನ್ ಅನ್ನು ನಿರಾಕರಿಸಿದ್ದರು. ಇದನ್ನು ಗಮನಿಸದೇ ವಿಪ್ರಾಜ್ ಓಡಿ ಹೋಗಿದ್ದರು.

ಇತ್ತ ವಿಪ್ರಾಜ್ ನಿಗಮ್ ಕ್ರೀಸ್ ಬಿಟ್ಟು ಓಡಿ ಹೋಗುತ್ತಿರುವುದನ್ನು ಗಮನಿಸಿದರೆ, ಕಾವ್ಯ ಮಾರನ್ ಸ್ಟೇಡಿಯಂನಲ್ಲಿ ಕೂತು ಔಟ್ ಮಾಡು ಔಟ್ ಮಾಡು ಎಂದು ಕೈಯಲ್ಲಿ ಸನ್ನೆ ಮಾಡುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದೀಗ ಈ ವಿಡಿಯೋ ಭಾರೀ ವೈರಲ್ ಆಗಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 133 ರನ್ ಕಲೆಹಾಕಿತು. ಆ ಬಳಿಕ ಸುರಿದ ಮಳೆಯಿಂದಾಗಿ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಬ್ಯಾಟ್ ಮಾಡಲು ಅವಕಾಶ ಸಿಕ್ಕಿರಲಿಲ್ಲ. ಹೀಗಾಗಿ ಸನ್​ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯವನ್ನು ರದ್ದುಗೊಳಿಸಲಾಗಿದೆ.