AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲುವೆ ನಿರ್ಮಾಣಕ್ಕಾಗಿ ರೈತರ ಜಮೀನನ್ನು ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ

ಕಾಲುವೆ ನಿರ್ಮಾಣಕ್ಕಾಗಿ ರೈತರ ಜಮೀನನ್ನು ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ

ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Feb 19, 2026 | 12:22 PM

Share

ಆಲಮಟ್ಟಿ ಕೃಷ್ಣಾ ಮೇಲ್ದಂಡೆ ಯೋಜನೆಗೆ (UKP) ಭೂಮಿ ನೀಡಿದ ರೈತರಿಗೆ ವರ್ಷಗಳಾದರೂ ಪರಿಹಾರ ಸಿಗಲಿಲ್ಲ. ವಿಜಯಪುರ ನ್ಯಾಯಾಲಯದ ಆದೇಶದಂತೆ, ಕೃಷ್ಣಾ ಭಾಗ್ಯ ಜಲ ನಿಗಮದ (KBJNL) ವ್ಯವಸ್ಥಾಪಕ ನಿರ್ದೇಶಕರ ಕಚೇರಿಯನ್ನು ಜಪ್ತಿ ಮಾಡಲಾಗಿದೆ. ಅಧಿಕಾರಿಗಳು ಪದೇ ಪದೇ ನ್ಯಾಯಾಲಯದ ಗಡುವು ಉಲ್ಲಂಘಿಸಿದ ಕಾರಣ, ವಾಹನಗಳು, ಪೀಠೋಪಕರಣಗಳು, ಕಂಪ್ಯೂಟರ್‌ಗಳು ಸೇರಿದಂತೆ ಕಚೇರಿ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದು ರೈತರ ಕಾನೂನು ಹೋರಾಟಕ್ಕೆ ಸಿಕ್ಕ ದೊಡ್ಡ ಜಯವಾಗಿದೆ.

ಆಲಮಟ್ಟಿ ಫೆ.19: ಆಲಮಟ್ಟಿ ಕೃಷ್ಣಾ ಮೇಲ್ದಂಡೆ ಯೋಜನೆ (UKP) ಕಾಲುವೆ ನಿರ್ಮಾಣಕ್ಕೆ ಜಮೀನು ನೀಡಿದ್ದ ರೈತರಿಗೆ ಸೂಕ್ತ ಪರಿಹಾರ ನೀಡದ ಹಿನ್ನೆಲೆಯಲ್ಲಿ, ವಿಜಯಪುರದ 1ನೇ ಹೆಚ್ಚುವರಿ ನ್ಯಾಯಾಲಯದ ಆದೇಶದಂತೆ ಕೃಷ್ಣಾ ಭಾಗ್ಯ ಜಲ ನಿಗಮದ (KBJNL) ವ್ಯವಸ್ಥಾಪಕ ನಿರ್ದೇಶಕರ (MD) ಕಚೇರಿಯನ್ನು ಜಪ್ತಿ ಮಾಡಲಾಗಿದೆ. ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ರೈತ ಮಹಾದೇವ ಲಿಗಾಡೆ ಹಾಗೂ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಗ್ರಾಮದ ಅಕ್ರುಸಾಬ ಮುಲ್ಲಾ ಸೇರಿದಂತೆ ಹಲವಾರು ರೈತರ ಜಮೀನನ್ನು ಕಾಲುವೆ ನಿರ್ಮಾಣಕ್ಕಾಗಿ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ಆದರೆ, ವರ್ಷಗಳು ಕಳೆದರೂ ಸರ್ಕಾರ ಹಾಗೂ ಅಧಿಕಾರಿಗಳು ಸೂಕ್ತ ಪರಿಹಾರ ನೀಡಿರಲಿಲ್ಲ. ಇದರಿಂದ ಆಕ್ರೋಶಗೊಂಡ ರೈತರು ನ್ಯಾಯದಕ್ಕಾಗಿ ಕೋರ್ಟ್ ಮೆಟ್ಟಿಲೇರಿದ್ದರು. ನ್ಯಾಯಾಲಯ ನೀಡಿದ್ದ ಗಡುವನ್ನು ಅಧಿಕಾರಿಗಳು ಪದೇ ಪದೇ ಉಲ್ಲಂಘಿಸಿದ ಕಾರಣ, ಇಂದು ಆಲಮಟ್ಟಿಯಲ್ಲಿರುವ ಎಂಡಿ ಕಚೇರಿಯ ಮೇಲೆ ದಾಳಿ ನಡೆಸಿ 1 ಇನ್ನೋವಾ ಕಾರು ಮತ್ತು 1 ಜೀಪು, 20 ಕುರ್ಚಿಗಳು ಮತ್ತು 22 ಟೇಬಲ್‌ಗಳು, 10 ಕಂಪ್ಯೂಟರ್‌ಗಳು ಸೇರಿದಂತೆ ಇತರೆ ಕಚೇರಿ ಸಾಮಗ್ರಿಗಳನ್ನು ಜಪ್ತಿ ಮಾಡಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More