‘ಕೆಡಿ’ ಸಿನಿಮಾ ಚಿತ್ರೀಕರಣದ ನಡುವೆ ನಂಜುಂಡೇಶ್ವರನಿಗೆ ನಮಿಸಿದ ಶಿಲ್ಪಾ ಶೆಟ್ಟಿ
ಬಾಲಿವುಡ್ನ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಅವರು ಕನ್ನಡದ ‘ಕೆಡಿ’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಧ್ರುವ ಸರ್ಜಾ ನಟನೆಯ ಈ ಚಿತ್ರಕ್ಕೆ ಮೈಸೂರಲ್ಲಿ ಚಿತ್ರೀಕರಣ ಮಾಡಲಾಗುತ್ತಿದೆ. ಶೂಟಿಂಗ್ ನಡುವೆ ಶಿಲ್ಪಾ ಶೆಟ್ಟಿ ಅವರು ನಂಜನಗೂಡಿಗೆ ತೆರಳಿ ನಂಜುಂಡೇಶ್ವರನ ದರ್ಶನ ಮಾಡಿದ್ದಾರೆ. ದೇವಸ್ಥಾನದಲ್ಲಿ ಧ್ಯಾನ ಮಾಡಿ, ದೇವರಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ.
ಬಹುನಿರೀಕ್ಷಿತ ‘ಕೆಡಿ’ ಸಿನಿಮಾದ ಸಲುವಾಗಿ ಬಾಲಿವುಡ್ (Bollywood) ಕಲಾವಿದೆ ಶಿಲ್ಪಾ ಶೆಟ್ಟಿ ಅವರು ಮೈಸೂರಿನಲ್ಲಿ ತಂಗಿದ್ದಾರೆ. ಶೂಟಿಂಗ್ ನಡುವೆ ಬಿಡುವು ಮಾಡಿಕೊಂಡು ಅವರು ನಂಜನಗೂಡಿನ ನಂಜುಂಡೇಶ್ವರನ ದೇವಾಲಯಕ್ಕೆ (Nanjundeshwara Temple) ಬಂದಿದ್ದಾರೆ. ಪೂಜೆ ಸಲ್ಲಿಸಿ, ದೇವಸ್ಥಾನದ ಆವರಣದಲ್ಲಿ ಶಿಲ್ಪಾ ಶೆಟ್ಟಿ ಅವರು ಧ್ಯಾನ ಮಾಡಿದ್ದಾರೆ. ಶಿಲ್ಪಾ ಶೆಟ್ಟಿ ಬಂದಿರುವ ವಿಷಯ ತಿಳಿದು, ಅವರನ್ನು ನೋಡುವ ಸಲುವಾಗಿ ಫ್ಯಾನ್ಸ್ ಮುಗಿಬಿದ್ದಿದ್ದಾರೆ. ಶಿಲ್ಪಾ ಶೆಟ್ಟಿ ಅವರು ಅಪಾರ ದೈವ ಭಕ್ತೆ. ಮೈಸೂರಿಗೆ ಬಂದಿರುವ ಅವರು ಇಲ್ಲಿನ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವುದನ್ನು ತಪ್ಪಿಸಿಲ್ಲ. ‘ಕೆಡಿ’ ಸಿನಿಮಾದಲ್ಲಿ ಅವರಿಗೆ ಒಂದು ಪ್ರಮುಖ ಪಾತ್ರವಿದೆ. ಈ ಚಿತ್ರಕ್ಕೆ ಪ್ರೇಮ್ ನಿರ್ದೇಶನ ಮಾಡುತ್ತಿದ್ದಾರೆ. ಬಹುವರ್ಷಗಳ ಬಳಿಕ ಈ ಸಿನಿಮಾದ ಮೂಲಕ ಶಿಲ್ಪಾ ಶೆಟ್ಟಿ (Shilpa Shetty) ಅವರು ಕನ್ನಡ ಚಿತ್ರರಂಗಕ್ಕೆ ಮರಳಿದ್ದಾರೆ. ಈ ಮೊದಲು ಬಿಡುಗಡೆ ಆದ ಅವರ ಫಸ್ಟ್ಲುಕ್ ಪೋಸ್ಟರ್ ನೋಡಿ ಅಭಿಮಾನಿಗಳ ನಿರೀಕ್ಷೆ ಹೆಚ್ಚಿದೆ. ಡಿಸೆಂಬರ್ನಲ್ಲಿ ‘ಕೆಡಿ’ ಬಿಡುಗಡೆ ಆಗಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.