Video: ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ

Updated on: May 02, 2025 | 8:02 AM

ಇಂದಿನಿಂದ ಚಾರ್​ಧಾಮ್ ಯಾತ್ರೆ ಆರಂಭಗೊಳ್ಳಲಿದೆ. ಮುಂದಿನ 6 ತಿಂಗಳ ಕಾಲ ಯಾತ್ರಿಕರು ಯಮುನೋತ್ರಿ, ಗಂಗೋತ್ರಿ, ಕೇದಾರನಾಥ ಮತ್ತು ಬದರಿನಾಥಕ್ಕೆ ಭೇಟಿ ನೀಡಲು ಸಾಧ್ಯವಾಗುತ್ತದೆ. ವಾಸ್ತವವಾಗಿ, ಚಾರ್‌ಧಾಮ್ ಯಾತ್ರೆಯು ಜಗತ್ತಿನ ಅತ್ಯಂತ ಪವಿತ್ರ ತೀರ್ಥಯಾತ್ರೆಗಳಲ್ಲಿ ಒಂದಾಗಿದೆ. ಕೇದಾರನಾಥ ಧಾಮವು 12 ಜ್ಯೋತಿರ್ಲಿಂಗಗಳಲ್ಲಿ ಒಂದಾಗಿದೆ ಮತ್ತು ಇದು ಶಿವನಿಗೆ ಅರ್ಪಿತವಾಗಿದೆ. ಬದರಿನಾಥ ಧಾಮವು ವಿಷ್ಣುವಿಗೆ ಅರ್ಪಿತವಾಗಿದೆ.

ರುದ್ರಪ್ರಯಾಗ, ಮೇ 02: ಇಂದಿನಿಂದ ಚಾರ್​ಧಾಮ್ ಯಾತ್ರೆ ಆರಂಭಗೊಳ್ಳಲಿದೆ. ಮುಂದಿನ 6 ತಿಂಗಳ ಕಾಲ ಯಾತ್ರಿಕರು ಯಮುನೋತ್ರಿ, ಗಂಗೋತ್ರಿ, ಕೇದಾರನಾಥ ಮತ್ತು ಬದರಿನಾಥಕ್ಕೆ ಭೇಟಿ ನೀಡಲು ಸಾಧ್ಯವಾಗುತ್ತದೆ. ವಾಸ್ತವವಾಗಿ, ಚಾರ್‌ಧಾಮ್ ಯಾತ್ರೆಯು ಜಗತ್ತಿನ ಅತ್ಯಂತ ಪವಿತ್ರ ತೀರ್ಥಯಾತ್ರೆಗಳಲ್ಲಿ ಒಂದಾಗಿದೆ. ಕೇದಾರನಾಥ ಧಾಮವು 12 ಜ್ಯೋತಿರ್ಲಿಂಗಗಳಲ್ಲಿ ಒಂದಾಗಿದೆ ಮತ್ತು ಇದು ಶಿವನಿಗೆ ಅರ್ಪಿತವಾಗಿದೆ. ಬದರಿನಾಥ ಧಾಮವು ವಿಷ್ಣುವಿಗೆ ಅರ್ಪಿತವಾಗಿದೆ. ಗಂಗೋತ್ರಿ ಧಾಮವು ಗಂಗಾ ಮಾತೆಗೆ ಸಮರ್ಪಿತವಾಗಿದೆ ಮತ್ತು ಯಮುನೋತ್ರಿಯು ಯಮುನೆಗೆ ಸಮರ್ಪಿತವಾಗಿದೆ. ಈ ಬಾರಿ ಚಾರ್‌ಧಾಮ್ ಯಾತ್ರೆಗೆ ವಿಶೇಷ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಈ ಪ್ರಯಾಣ ಮಾರ್ಗದಲ್ಲಿ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗುತ್ತಿದೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: May 02, 2025 08:02 AM
Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More