ನಿಂತಿದ್ದವನು ಮೆಟ್ರೋ ಹಳಿಗೆ ದಿಢೀರನೆ ಜಿಗಿದ್ಬಿಟ್ಟ; ವ್ಯಕ್ತಿಯ ಆತ್ಮಹತ್ಯೆಯ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು? ಈ ವೀಡಿಯೋ ನೋಡಿ
ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ಇಂದು ಬೆಳಗ್ಗೆ 8:15ರ ಸುಮಾರಿಗೆ ದುರದೃಷ್ಟಕರ ಘಟನೆಯೊಂದು ನಡೆದಿದೆ. ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ಮೂಲದ 38 ವರ್ಷದ ಸಾಫ್ಟ್‌ವೇರ್ ಉದ್ಯೋಗಿ ಶಾಂತನಗೌಡ ಎಂಬುವವರು ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕೂಡಲೇ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಪ್ರತ್ಯಕ್ಷದರ್ಶಿಗಳು, ಈ ಘಟನೆಯಿಂದಾಗಿ ಮೆಟ್ರೋ ಸೇವೆಗಳಲ್ಲಿ ಸುಮಾರು ಎರಡು ಗಂಟೆಗಳ ಕಾಲ ತೀವ್ರ ವ್ಯತ್ಯಯ ಉಂಟಾಗಿತ್ತು. ಬೆಳಗ್ಗೆ ಕೆಲಸಕ್ಕೆ ತೆರಳುತ್ತಿದ್ದ ನೂರಾರು ಐಟಿ ಉದ್ಯೋಗಿಗಳು ಸೇರಿದಂತೆ ಅನೇಕ ಪ್ರಯಾಣಿಕರು ತೊಂದರೆ ಅನುಭವಿಸಿದ್ದಾರೆ.
ಬೆಂಗಳೂರು, ಡಿಸೆಂಬರ್ 05: ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ಇಂದು ಬೆಳಗ್ಗೆ 8:15ರ ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ಮೂಲದ 38 ವರ್ಷದ ಸಾಫ್ಟ್‌ವೇರ್ ಉದ್ಯೋಗಿ ಶಾಂತನಗೌಡ ಎಂಬುವವರು ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕೂಡಲೇ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಪ್ರತ್ಯಕ್ಷದರ್ಶಿಗಳು, ಈ ಘಟನೆಯಿಂದಾಗಿ ಮೆಟ್ರೋ ಸೇವೆಗಳಲ್ಲಿ ಸುಮಾರು ಎರಡು ಗಂಟೆಗಳ ಕಾಲ ತೀವ್ರ ವ್ಯತ್ಯಯ ಉಂಟಾಗಿತ್ತು. ಬೆಳಗ್ಗೆ ಕೆಲಸಕ್ಕೆ ತೆರಳುತ್ತಿದ್ದ ನೂರಾರು ಐಟಿ ಉದ್ಯೋಗಿಗಳು ಸೇರಿದಂತೆ ಅನೇಕ ಪ್ರಯಾಣಿಕರು ತೊಂದರೆ ಅನುಭವಿಸಿದ್ದಾರೆ. ಕೆಲವರು ಆಟೋಗಳ ಮೂಲಕ ತೆರಳಿದರೆ, ಇನ್ನೂ ಕೆಲವರು ತಮ್ಮ ಪ್ರಯಾಣವನ್ನು ರದ್ದುಗೊಳಿಸಿ ವಾಪಸ್ ತೆರಳಿದರು. ಕೆಂಗೇರಿ ಮೆಟ್ರೋ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ಶಾಂತನಗೌಡರ ವಾಹನ ಪತ್ತೆಯಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ ಎಂದು ಹೇಳಿದ್ದಾರೆ. ಈ ವೀಡಿಯೋ ನೋಡಿ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Dec 05, 2025 12:38 PM
