ಕೆರಗೋಡು ವಿವಾದ; ಕನಿಷ್ಟ ಜ್ಞಾನವಿಲ್ಲದ ಬಿಜೆಪಿ ನಾಯಕರು ವಿನಾಕಾರಣ ವಿವಾದ ಸೃಷ್ಟಿಸುತ್ತಿದ್ದಾರೆ: ಡಿಕೆ ಶಿವಕುಮಾರ್

|

Updated on: Jan 29, 2024 | 12:17 PM

ಮಂಡ್ಯದಲ್ಲಿ ಹಿಂದೂ ಕಾರ್ಯಕರ್ತರು ಮತ್ತು ಬಿಜೆಪಿ ಮುಖಂಡರು ಸರ್ಕಾರದ ಕ್ರಮದ ವಿರುದ್ಧ ಮಂಡ್ಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಗಮನಿಸಬೇಕಾದ ಸಂಗತಿಯೆಂದರೆ, ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಗಾಲಿ ಜನಾರ್ಧನ ರೆಡ್ಡಿಯವರು ಸಹ ತಮ್ಮ ಕಾರ್ಯಕರ್ತರೊಂದಿಗೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ

ಮಂಡ್ಯ: ಜಿಲ್ಲೆಯ ಮಂಡ್ಯ ತಾಲ್ಲೂಕಿನ ಕೆರಗೋಡು ಹನುಮ ಧ್ವಜ ವಿವಾದ (Hanuma flag row) ರಾಜ್ಯದಲ್ಲ ಪ್ರತಿಭಟನೆಗಳಗೆ ಕಾರಣವಾಗಿದೆ. ಮಂಡ್ಯದಲ್ಲಿ ಹಿಂದೂ ಕಾರ್ಯಕರ್ತರು ಮತ್ತು ಬಿಜೆಪಿ ಮುಖಂಡರು (BJP leaders) ಸರ್ಕಾರದ ಕ್ರಮದ ವಿರುದ್ಧ ಮಂಡ್ಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಗಮನಿಸಬೇಕಾದ ಸಂಗತಿಯೆಂದರೆ, ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಗಾಲಿ ಜನಾರ್ಧನ ರೆಡ್ಡಿಯವರು (Gali Janardhan Reddy) ಸಹ ತಮ್ಮ ಕಾರ್ಯಕರ್ತರೊಂದಿಗೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಏತನ್ಮಧ್ಯೆ, ಬಿಜೆಪಿ ಮುಖಂಡರು ನಡೆಸುತ್ತಿರುವ ಪ್ರತಿಭಟನೆಯನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಖಾರವಾಗಿ ಟೀಕಿಸಿದ್ದಾರೆ. ಕಾಂಗ್ರೆಸ್ ಶಾಸಕ ಎನ್ ಎ ಹ್ಯಾರಿಸ್ ಮನೆಯಿಂದ ಆಚೆಬಂದ ಬಳಿಕ ಅವಸರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಬಿಜೆಪಿ ನಾಯಕರಿಗೆ ಕನಿಷ್ಟ ಜ್ಞಾನವೂ ಇಲ್ಲ, ಉದ್ದೇಶಪೂರ್ವಕವಾಗಿ ಹನುಮ ಧ್ವಜ ಪ್ರಕರಣವನ್ನು ದೊಡ್ಡದು ಮಾಡುತ್ತಿದ್ದಾರೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ