AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಸಿಎಂ ಸ್ಥಾನಕ್ಕೆ ತೀವ್ರ ಪೈಪೋಟಿ: ಈ ಮೂವರಲ್ಲೇ ಒಬ್ಬರು ಮುಖ್ಯಮಂತ್ರಿ ಆಗೋದು ಪಕ್ಕಾ?

ಕೇರಳ ಸಿಎಂ ಸ್ಥಾನಕ್ಕೆ ತೀವ್ರ ಪೈಪೋಟಿ: ಈ ಮೂವರಲ್ಲೇ ಒಬ್ಬರು ಮುಖ್ಯಮಂತ್ರಿ ಆಗೋದು ಪಕ್ಕಾ?

ಕಿರಣ್​ ಹನಿಯಡ್ಕ
| Edited By: |

Updated on: May 07, 2026 | 1:02 PM

Share

ಕೇರಳ ಸಿಎಂ ಸ್ಥಾನಕ್ಕೆ ಕೆ.ಸಿ. ವೇಣುಗೋಪಾಲ್, ವಿ.ಡಿ. ಸತೀಶನ್ ಮತ್ತು ರಮೇಶ್ ಚೆನ್ನಿತಲ ನಡುವೆ ತೀವ್ರ ಪೈಪೋಟಿ ನಡೆದಿದೆ. ಕಾಂಗ್ರೆಸ್ ಹೈಕಮಾಂಡ್ ವೀಕ್ಷಕರ ಮೂಲಕ ಶಾಸಕರ ಅಭಿಪ್ರಾಯ ಸಂಗ್ರಹಿಸುತ್ತಿದೆ. ಶಾಸಕರ ಬೆಂಬಲದ ವರದಿ ಆಧರಿಸಿ ಹೈಕಮಾಂಡ್ ಮುಖ್ಯಮಂತ್ರಿ ಆಯ್ಕೆಯ ನಿರ್ಧಾರ ತೆಗೆದುಕೊಳ್ಳಲಿದೆ. ಮೇ 10ರಂದು ಹೊಸ ಸಿಎಂ ಅಧಿಕಾರ ಸ್ವೀಕಾರ ಸಾಧ್ಯತೆ ಇದೆ.

ತಿರುವನಂತಪುರಂ, ಮೇ 07: ಕೇರಳದಲ್ಲಿ ಹೊಸ ಸರ್ಕಾರ ರಚನೆ ಪ್ರಕ್ರಿಯೆಗಳು ಚುರುಕುಗೊಂಡಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ತೀವ್ರ ಪೈಪೋಟಿ ಉಂಟಾಗಿದೆ. ಕಾಂಗ್ರೆಸ್‌ನ ಪ್ರಮುಖ ನಾಯಕರಾದ ಕೆ.ಸಿ. ವೇಣುಗೋಪಾಲ್, ವಿ.ಡಿ. ಸತೀಶನ್ ಮತ್ತು ರಮೇಶ್ ಚೆನ್ನಿತಲ ಸಿಎಂ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಈ ಮೂವರ ನಡುವೆ ಸ್ಪರ್ಧೆ ಹಿನ್ನೆಲೆ ಹೈಕಮಾಂಡ್ ಶಾಸಕರ ಅಭಿಪ್ರಾಯ ಸಂಗ್ರಹಿಸಲು ಮುಂದಾಗಿದೆ. ಈ ಪ್ರಕ್ರಿಯೆಗಾಗಿ ಎಐಸಿಸಿ ವೀಕ್ಷಕರಾದ ಮುಕುಲ್ ವಾಸನಿಕ್ ಮತ್ತು ಅಜಯ್ ಮಾಕೇನ್ ಅವರು ಕೇರಳದ ತಿರುವನಂತಪುರಂನ ಕೆಪಿಸಿಸಿ ಕಚೇರಿಗೆ ಆಗಮಿಸಿದ್ದಾರೆ. 63 ಕಾಂಗ್ರೆಸ್ ಶಾಸಕರಿಂದ ಪ್ರತ್ಯೇಕವಾಗಿ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ಆರಂಭಿಕ ಮಾಹಿತಿಗಳ ಪ್ರಕಾರ, ಕೆ.ಸಿ. ವೇಣುಗೋಪಾಲ್ ಅವರಿಗೆ 47 ಶಾಸಕರ, ವಿ.ಡಿ. ಸತೀಶನ್ ಅವರಿಗೆ 35 ಶಾಸಕರ ಮತ್ತು ರಮೇಶ್ ಚೆನ್ನಿತಲ ಅವರಿಗೆ 16 ಶಾಸಕರ ಬೆಂಬಲವಿದೆ ಎಂದು ತಿಳಿದುಬಂದಿದೆ. ಈ ವರದಿಗಳನ್ನು ಆಧರಿಸಿ ಹೈಕಮಾಂಡ್ ಅಂತಿಮ ನಿರ್ಧಾರ ಪ್ರಕಟಿಸಲಿದೆ. ಮೇ 10ರೊಳಗೆ ಕೇರಳದಲ್ಲಿ ಹೊಸ ಕಾಂಗ್ರೆಸ್ ಮುಖ್ಯಮಂತ್ರಿ ಅಧಿಕಾರ ಸ್ವೀಕಾರ ಮಾಡುವ ನಿರೀಕ್ಷೆಯಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us