ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಕೇರಳ ಸಿಎಂ ಸತೀಶನ್ ಭೇಟಿ
Kerala CM VD Satheesan Visits Kollur Mookambika Temple: ಇತ್ತೀಚೆಗೆಷ್ಟೇ ತಮಿಳುನಾಡು ನೂತನ ಸಿಎಂ ಜೋಸೆಫ್ ವಿಜಯ್ ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಭೇಟಿ ನೀಡಿದ್ದು ದೊಡ್ಡ ಸುದ್ದಿಯಾಗಿತ್ತು. ಇದೀಗ ಕೇರಳ ನೂತನ ಸಿಎಂ ವಿಡಿ ಸತೀಶನ್ ಸಹ ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ತೆರಳಿ ದೇವಿಯ ದರ್ಶನ ಪಡೆದಿದ್ದಾರೆ.
ಉಡುಪಿ, ಜುಲೈ 11: ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಕೇರಳ ಸಿಎಂ ವಿಡಿ ಸತೀಶನ್ ಶನಿವಾರ ಬೆಳಗ್ಗೆ ಭೇಟಿ ನೀಡಿ ಮೂಕಾಂಬಿಕೆಯ ದರ್ಶನ ಪಡೆದರು. ಝಡ್ ಪ್ಲಸ್ ಭದ್ರತೆಯಲ್ಲಿ ದೇವಸ್ಥಾನಕ್ಕೆ ಬಂದಿದ್ದ ಕೇರಳ ಸಿಎಂಗೆ ದೇವಾಲಯದ ಆಡಳಿತ ಮಂಡಳಿ ವತಿಯಿಂದ ಗೌರವ ಸಲ್ಲಿಸಲಾಯಿತು. ವಿಶೇಷ ಪೂಜೆ ಸಲ್ಲಿಸಿದ ಸತೀಶನ್ ಬಳಿಕ ಮಂಗಳೂರು ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ಇತ್ತೀಚೆಗೆಷ್ಟೇ ತಮಿಳುನಾಡು ನೂತನ ಸಿಎಂ ಜೋಸೆಫ್ ವಿಜಯ್ ಸಹ ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಭೇಟಿ ನೀಡಿದ್ದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos

