ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್​ಗೆ ಭರ್ಜರಿ ಮುನ್ನಡೆ: ಕೋಝಿಕ್ಕೋಡ್​ಗೆ ಧಾವಿಸಿದ ಸಚಿವ ಜಮೀರ್ ಅಹ್ಮದ್

Updated on: May 04, 2026 | 11:25 AM

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್ ಭಾರಿ ಮುನ್ನಡೆ ಸಾಧಿಸಿದ ಹಿನ್ನೆಲೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಕ್ಯಾಲಿಕಟ್​ಗೆ ತೆರಳಿದ್ದಾರೆ. ಯುಡಿಎಫ್ ಪರವಾಗಿ ಪ್ರಚಾರ ನಡೆಸಿದ್ದ ಜಮೀರ್ ಅಹ್ಮದ್, ವೇಣುಗೋಪಾಲ್ ಸೂಚನೆ ಮೇರೆಗೆ ಕೇರಳಕ್ಕೆ ತೆರಳಿದ್ದರು. ಈ ವಿಜಯೋತ್ಸವವು ರಾಜ್ಯದ ರಾಜಕೀಯದಲ್ಲಿ ಹೊಸ ಆಶಾಭಾವ ಮೂಡಿಸಿದೆ.

ಬೆಂಗಳೂರು, ಮೇ 4: ಕೇರಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಯುಡಿಎಫ್ (ಕಾಂಗ್ರೆಸ್ ಮೈತ್ರಿಕೂಟ) ಭಾರಿ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆಯಲ್ಲಿ, ಕರ್ನಾಟಕದ ಸಚಿವ ಜಮೀರ್ ಅಹ್ಮದ್ ಖಾನ್ ಕ್ಯಾಲಿಕಟ್ (ಕೋಝಿಕ್ಕೋಡ್) ನಗರಕ್ಕೆ ತೆರಳಿದ್ದಾರೆ. ಇದು ಯುಡಿಎಫ್ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ತಂದಿದೆ. ಜಮೀರ್ ಅಹ್ಮದ್ ಖಾನ್ ಅವರು ಕೇರಳದಲ್ಲಿ ಯುಡಿಎಫ್ ಪರವಾಗಿ ವ್ಯಾಪಕವಾಗಿ ಪ್ರಚಾರ ನಡೆಸಿದ್ದರು. ಪಕ್ಷದ ಹಿರಿಯ ನಾಯಕ ವೇಣುಗೋಪಾಲ್ ಅವರ ಸೂಚನೆಯ ಮೇರೆಗೆ ಅವರು ಕೇರಳಕ್ಕೆ ತೆರಳಿದ್ದರು. ಯುಡಿಎಫ್ ಅಭ್ಯರ್ಥಿಗಳ ಪರವಾಗಿ ಮತಯಾಚಿಸಿದ್ದ ಜಮೀರ್ ಅಹ್ಮದ್, ಈಗ ಪಕ್ಷದ ಯಶಸ್ಸನ್ನು ಸಂಭ್ರಮಿಸಲು ಅಲ್ಲಿಗೆ ತಲುಪಿದ್ದಾರೆ.

ಚುನಾವಣಾ ಫಲಿತಾಂಶದ ಲೈವ್​ ಅಪ್​​ಡೇಟ್​​ಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More