Video: ಆಂಬ್ಯುಲೆನ್ಸ್​ಗೆ ದಾರಿ ಬಿಡದ ಕಾರು ಚಾಲಕನಿಗೆ 2.5 ಲಕ್ಷ ರೂ. ದಂಡ

Video: ಆಂಬ್ಯುಲೆನ್ಸ್​ಗೆ ದಾರಿ ಬಿಡದ ಕಾರು ಚಾಲಕನಿಗೆ 2.5 ಲಕ್ಷ ರೂ. ದಂಡ

ನಯನಾ ರಾಜೀವ್
|

Updated on:Nov 18, 2024 | 8:03 AM

ಆಂಬ್ಯುಲೆನ್ಸ್​ಗೆ ದಾರಿ ಬಿಡದ ಚಾಲಕನಿಗೆ 2.5 ಲಕ್ಷ ರೂ. ದಂಡ ವಿಧಿಸಿರುವ ಘಟನೆ ಕೇರಳದಲ್ಲಿ ನಡೆದಿದೆ. ರೋಗಿಯನ್ನು ಹೊತ್ತೊಯ್ಯುತ್ತಿದ್ದ ಆಂಬ್ಯುಲೆನ್ಸ್‌ ಸೈರನ್ ಹೇಗೂ ಇತ್ತು ಜತೆಗೆ ಹಾರ್ನ್​ ಮಾಡಿದರೂ ಕೂಡ ಮುಂದಿದ್ದ ಕಾರು ಚಾಲಕ ಪಕ್ಕಕ್ಕೆ ಸರಿಯದೆ ಸತಾಯಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋ ವೈರಲ್ ಆದ ನಂತರ ಕೇರಳ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಆಂಬ್ಯುಲೆನ್ಸ್‌ನಲ್ಲಿ ರೋಗಿಯೊಬ್ಬರು ಇದ್ದರು, ಅವರು ಶೀಘ್ರದಲ್ಲೇ ಆಸ್ಪತ್ರೆಯನ್ನು ತಲುಪಬೇಕಾಗಿತ್ತು, ಆದ್ದರಿಂದ ಆಂಬ್ಯುಲೆನ್ಸ್ ಚಾಲಕ ಸೈರನ್ ಹಾಕಿಕೊಂಡಿದ್ದರು. ಬಹುತೇಕ ಎಲ್ಲ ವಾಹನಗಳು ದಾರಿ ಬಿಟ್ಟುಕೊಟ್ಟರೂ ಈ ಚಾಲಕ ಮಾತ್ರ ಬಿಟ್ಟುಕೊಟ್ಟಿರಲಿಲ್ಲ. ಇದಾದ ಬಳಿಕ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ.

ಕಾರು ಮಾಲೀಕನನ್ನು ಪತ್ತೆ ಹಚ್ಚಿದ ಪೊಲೀಸರು ನೇರವಾಗಿ ಆತನ ಮನೆಗೆ ತೆರಳಿ 2.5 ಲಕ್ಷ ರೂ. ದಂಡ ವಿಧಿಸಿದ್ದಷ್ಟೇ ಅಲ್ಲದೆ, ಆತನ ಡ್ರೈವಿಂಗ್ ಲೈಸನ್ಸ್ ರದ್ದುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ರಸ್ತೆ ಸುರಕ್ಷತಾ ನಿಯಮಗಳು ಮತ್ತು ಕಾನೂನುಗಳಡಿಯಲ್ಲಿ ಆಂಬ್ಯುಲೆನ್ಸ್‌ಗಳಿಗೆ ದಾರಿ ಮಾಡಿಕೊಡುವುದು ಒಂದು ಪ್ರಮುಖ ಅಂಶವಾಗಿದೆ ಮತ್ತು ದಾರಿ ಬಿಡದವರು ಶಿಕ್ಷಾರ್ಹರು ಎಂದು ನಿತಿನ್ ಗಡ್ಕರಿ ಹೇಳಿದ್ದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Nov 18, 2024 07:53 AM