Kerala Landslide: ಕೇರಳ ಗುಡ್ಡ ಕುಸಿತದ ಬಳಿಕದ ಭಯಾನಕ ವಿಡಿಯೋ ಇಲ್ಲಿದೆ

Kerala Landslide: ಕೇರಳ ಗುಡ್ಡ ಕುಸಿತದ ಬಳಿಕದ ಭಯಾನಕ ವಿಡಿಯೋ ಇಲ್ಲಿದೆ

ನಯನಾ ರಾಜೀವ್
|

Updated on: Jul 30, 2024 | 11:12 AM

ಕೇರಳದಲ್ಲಿ ಇಂದು ಬೆಳಗಿನ ಜಾವ ಎರಡು ಬಾರಿ ಗುಡ್ಡ ಕುಸಿದಿದ್ದು, ಅನೇಕ ಸಾವು-ನೋವುಗಳು ಸಂಭವಿಸಿದೆ. 100ಕ್ಕೂ ಹೆಚ್ಚು ಮಂದಿ ಮಣ್ಣಿನಡಿಯಲ್ಲಿ ಸಿಲುಕಿರಬಹುದು ಎಂದು ಅಂದಾಜಿಸಲಾಗಿದೆ.

ಕೇರಳದಲ್ಲಿ ಇಂದು ಬೆಳಗಿನ ಜಾವ ಎರಡು ಬಾರಿ ಗುಡ್ಡ ಕುಸಿದಿದ್ದು, ಅನೇಕ ಸಾವು-ನೋವುಗಳು ಸಂಭವಿಸಿದೆ. 100ಕ್ಕೂ ಹೆಚ್ಚು ಮಂದಿ ಮಣ್ಣಿನಡಿಯಲ್ಲಿ ಸಿಲುಕಿರಬಹುದು ಎಂದು ಅಂದಾಜಿಸಲಾಗಿದೆ.

ವಯನಾಡು ಜಿಲ್ಲೆಯ ಅಧಿಕಾರಿಗಳ ಪ್ರಕಾರ ತೊಂಡರ್ನಾಡ್ ಗ್ರಾಮದಲ್ಲಿ ವಾಸಿಸುತ್ತಿದ್ದ ನೇಪಾಳಿ ಕುಟುಂಬದ ಒಂದು ವರ್ಷದ ಮಗು ಭೂಕುಸಿತವೊಂದರಲ್ಲಿ ಸಾವನ್ನಪ್ಪಿದೆ. ಭಾರೀ ಭೂಕುಸಿತದ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ಸಂಸ್ಥೆಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ.

ನಸುಕಿನ ಜಾವ 2 ಗಂಟೆಗೆ ಮೊದಲ ಭೂಕುಸಿತ ಸಂಭವಿಸಿದರೆ ಮುಂಜಾನೆ 4.10ರ ವೇಳೆ ಎರಡನೇ ಬಾರಿ ಸಂಭವಿಸಿದೆ. ಜಲಸ್ಫೋಟದಿಂದಾಗಿ ಗುಡ್ಡದಿಂದ ನೀರು ರಭಸವಾಗಿ ಮನೆಗಳ ಮೇಲೆ ಹರಿದು ಹೋಗಿದ್ದರಿಂದ ಸಾವು ನೋವಿನ ಪ್ರಮಾಣ ಏರಿಕೆಯಾಗುವ ಸಾಧ್ಯತೆಯಿದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ