AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

VD Satheesan Oath Taking: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸತೀಶನ್

VD Satheesan Oath Taking: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸತೀಶನ್

ನಯನಾ ರಾಜೀವ್
|

Updated on:May 18, 2026 | 10:32 AM

Share

Kerala New Chief Minister VD Satheesan Swearing-in Ceremony: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ಸತೀಶನ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಜೊತೆಗೆ 20 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದು, ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರು ಪ್ರಮಾಣ ವಚನ ಬೋಧಿಸಿದ್ದಾರೆ. ಇತ್ತೀಚೆಗೆ ನಡೆದ ಕೇರಳಂ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಅಧಿಕಾರಕ್ಕೇರಿರುವ ಕಾಂಗ್ರೆಸ್​​ ನೇತೃತ್ವದ ಯುಡಿಎಫ್, ನೂತನ ಸಿಎಂ ಆಗಿ ವಿಡಿ ಸತೀಶನ್ ಅವರನ್ನು ಆಯ್ಕೆ ಮಾಡಿದೆ.

ತಿರುವನಂತಪುರಂ, ಮೇ 18: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಜೊತೆಗೆ 20 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದು, ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರು ಪ್ರಮಾಣ ವಚನ ಬೋಧಿಸಿದ್ದಾರೆ. ಇತ್ತೀಚೆಗೆ ನಡೆದ ಕೇರಳಂ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಅಧಿಕಾರಕ್ಕೇರಿರುವ ಕಾಂಗ್ರೆಸ್​​ ನೇತೃತ್ವದ ಯುಡಿಎಫ್, ನೂತನ ಸಿಎಂ ಆಗಿ ವಿಡಿ ಸತೀಶನ್ ಅವರನ್ನು ಆಯ್ಕೆ ಮಾಡಿದೆ.

ಕಾಂಗ್ರೆಸ್​ನಿಂದ 11 ಮಂದಿ, ಮುಸ್ಲಿಂ ಲೀಗ್​ನ ಐವರು ಹಾಗೂ ಮಾನ್ಸ್ ಜೋಸೆಫ್ (ಕೇರಳ ಕಾಂಗ್ರೆಸ್-ಜೋಸೆಫ್), ಶಿಬು ಬೇಬಿ ಜಾನ್ (ಕ್ರಾಂತಿಕಾರಿ ಸಮಾಜವಾದಿ ಪಕ್ಷ), ಅನೂಪ್ ಜಾಕೋಬ್ (ಕೇರಳ ಕಾಂಗ್ರೆಸ್-ಜಾಕೋಬ್), ಮತ್ತು ಸಿಪಿ ಜಾನ್ (ಕಮ್ಯುನಿಸ್ಟ್ ಮಾರ್ಕ್ಸ್ವಾದಿ ಪಕ್ಷ) ಅವರಿಗೂ ಅವಕಾಶ ಮಾಡಿಕೊಡಲಾಗಿದೆ. ಕಾಂಗ್ರೆಸ್​ನಿಂದ ಸಿಎಂ ಹುದ್ದೆಯ ಆಕಾಂಕ್ಷಿಯಾಗಿದ್ದ ರಮೇಶ್ ಚೆನ್ನಿತ್ತಲ, ಸನ್ನಿ ಜೋಸೆಫ್, ಕೆ ಮುರಳೀಧರನ್, ಎ ಪಿ ಅನಿಲ್ ಕುಮಾರ್, ಪಿ ಸಿ ವಿಷ್ಣುನಾಥ್, ರೋಜಿ ಎಂ ಜಾನ್, ಬಿಂದು ಕೃಷ್ಣ, ಎಂ ಲಿಜು, ಟಿ ಸಿದ್ದಿಕ್, ಕೆ ಎ ತುಳಸಿ ಮತ್ತು ಒ ಜೆ ಜನೀಶ್ ಸಚಿವರಾಗಲಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: May 18, 2026 10:23 AM
Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More