ಕೇರಳದ ಮುನ್ನಾರ್ನಲ್ಲಿ ಬಸ್ ಪಲ್ಟಿಯಾಗಿ, ಮೂವರು ಕಾಲೇಜು ವಿದ್ಯಾರ್ಥಿಗಳು ಸಾವು
ತಿರುವನಂತಪುರಂ, ಫೆಬ್ರವರಿ 20: ಕೇರಳದ ಮುನ್ನಾರ್ನಲ್ಲಿ ಬಸ್ ಪಲ್ಟಿಯಾದ ಪರಿಣಾಮ ಮೂವರು ಕಾಲೇಜು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಮೃತರು ತಮಿಳುನಾಡಿನವರು . ಪ್ರಸಿದ್ಧ ಪ್ರವಾಸಿ ತಾಣವಾದ ಎಕೋ ಪಾಯಿಂಟ್ ಬಳಿ ಈ ಅಪಘಾತ ಸಂಭವಿಸಿದೆ. ಮೃತರನ್ನು ವೆನಿಕಾ ಆರ್, ಅತಿಕಾ ಆರ್ ಮತ್ತು ಸುಧನ್ ಎಂದು ಗುರುತಿಸಲಾಗಿದ್ದು, ತಮಿಳುನಾಡಿನ ನಾಗರ್‌ಕೋಯಿಲ್‌ನಲ್ಲಿರುವ ಸ್ಕಾಟ್ ಕ್ರಿಶ್ಚಿಯನ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ.

37 ವಿದ್ಯಾರ್ಥಿಗಳು ಮತ್ತು ನಾಲ್ವರು ಶಿಕ್ಷಕರನ್ನು ಒಳಗೊಂಡ ಈ ಗುಂಪು ಮಂಗಳವಾರ ರಾತ್ರಿ ನಾಗರಕೋಯಿಲ್‌ನಿಂದ ಹೊರಟು ಬುಧವಾರ ಮುಂಜಾನೆ ಮುನ್ನಾರ್ ತಲುಪಿತ್ತು. ಜನಪ್ರಿಯ ಪ್ರವಾಸಿ ತಾಣವಾದ ಕುಂಡಲ ಅಣೆಕಟ್ಟಿನ ಕಡೆಗೆ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಬಸ್ ತಿರುವು ಪಡೆಯುವ ಸಮಯದಲ್ಲಿ ನಿಯಂತ್ರಣ ಕಳೆದುಕೊಂಡು ಹೆದ್ದಾರಿಯಿಂದ ಹೊರಟು ಪಕ್ಕಕ್ಕೆ ಪಲ್ಟಿಯಾಗಿದೆ.
19 ಜನರನ್ನು ಮುನ್ನಾರ್‌ನ ಟಾಟಾ ಜನರಲ್ ಆಸ್ಪತ್ರೆಗೆ ದಾಖಲಿಸಲಾಯಿತು, ಆದರೆ ನಾಲ್ವರು ಗಂಭೀರವಾಗಿ ಗಾಯಗೊಂಡವರನ್ನು ಥೇಣಿ, ಕೊಲೆಂಚೇರಿ ಮತ್ತು ಕೊಟ್ಟಾಯಂನ ವೈದ್ಯಕೀಯ ಕಾಲೇಜುಗಳಿಗೆ ಸ್ಥಳಾಂತರಿಸಲಾಯಿತು. ಅಪಘಾತಕ್ಕೆ ಅತಿವೇಗದ ಚಾಲನೆಯೇ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ಊಹಿಸಿದ್ದರೂ, ನಿಖರವಾದ ಕಾರಣ ಇನ್ನೂ ದೃಢಪಟ್ಟಿಲ್ಲ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ