AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

Video: ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಅಕ್ಷತಾ ವರ್ಕಾಡಿ
|

Updated on:May 23, 2026 | 11:19 AM

Share

ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಪಂಚಾಯತ್‌ನ ಕುಡಿಯುವ ನೀರಿನ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಭೀಕರ ಅಪಘಾತದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅತಿಯಾದ ವೇಗ ಅಥವಾ ತಾಂತ್ರಿಕ ದೋಷ ಕಾರಣವೆಂದು ಶಂಕಿಸಲಾಗಿದೆ. ಅದೃಷ್ಟವಶಾತ್ ದೊಡ್ಡ ಪ್ರಾಣಾಪಾಯ ತಪ್ಪಿದೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಕೇರಳದ ತ್ರಿಶೂರ್ ಜಿಲ್ಲೆಯ ಎರುಮಪೆಟ್ಟಿ ಕುಟ್ಟಂಚೇರಿ ನೆಲ್ಲಿಕುನ್ನು ಎಂಬಲ್ಲಿ ಪಂಚಾಯತ್‌ಗೆ ಸೇರಿದ ಕುಡಿಯುವ ನೀರಿನ ಟ್ಯಾಂಕರ್ ಒಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ತಲೆಕೆಳಗಾಗಿ ಉರುಳಿಬಿದ್ದಿದೆ. ಈ ಭೀಕರ ಅಪಘಾತದ ದೃಶ್ಯಗಳು ಅಲ್ಲಿನ ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಸಂಚಲನ ಮೂಡಿಸಿವೆ. ವಾಹನದ ವೇಗ ಅಥವಾ ತಾಂತ್ರಿಕ ದೋಷವೇ ಈ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಮಟ್ಟದ ಪ್ರಾಣಾಪಾಯ ತಪ್ಪಿದೆ ಎನ್ನಲಾಗಿದೆ. ಸದ್ಯ ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: May 23, 2026 11:18 AM
Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More