26 ಎಸೆತಗಳಲ್ಲಿ 5 ವಿಕೆಟ್ ಕಬಳಿಸಿದ ಕೇಶವ್ ಮಹಾರಾಜ್: ಸೌತ್ ಆಫ್ರಿಕಾಗೆ ಅಮೋಘ ಜಯ
Australia vs South Africa: 297 ರನ್ಗಳ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ತಂಡವು ಮೊದಲ ವಿಕೆಟ್ಗೆ 60 ರನ್ಗಳಿಸಿ ಉತ್ತಮ ಆರಂಭ ಪಡೆದುಕೊಂಡಿತ್ತು. ಆದರೆ ಈ ಹಂತದಲ್ಲಿ ದಾಳಿಗಿಳಿದ ಕೇಶವ್ ಮಹಾರಾಜ್ ಆಸೀಸ್ ಪಡೆಗೆ ಆಘಾತದ ಮೇಲೆ ಆಘಾತ ನೀಡಿದರು. ಅದರಲ್ಲೂ ಕೇವಲ 26 ಎಸೆತಗಳಲ್ಲಿ 5 ವಿಕೆಟ್ ಉರುಳಿಸುವ ಮೂಲಕ ಸೌತ್ ಆಫ್ರಿಕಾ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಅಂತಿಮವಾಗಿ ಆಸ್ಟ್ರೇಲಿಯಾ ತಂಡವು 40.5 ಓವರ್ಗಳಲ್ಲಿ 198 ರನ್ಗಳಿಸಿ ಆಲೌಟ್ ಆಯಿತು.
ಕೈರ್ನ್ಸ್ನ ಕಝಲಿ ಕ್ರೀಡಾಂಗಣದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಅಮೋಘ ಗೆಲುವು ದಾಖಲಿಸಿದೆ. ಈ ಗೆಲುವಿನ ರೂವಾರಿ ಕೇಶವ್ ಮಹಾರಾಜ್. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ಪರ ಐಡೆನ್ ಮಾರ್ಕ್ರಾಮ್ (82), ಟೆಂಭಾ ಬವುಮಾ (65) ಅರ್ಧಶತಕ ಬಾರಿಸಿ ಮಿಂಚಿದರು. ಈ ಅರ್ಧಶತಕಗಳ ನೆರವಿನೊಂದಿಗೆ ಸೌತ್ ಆಫ್ರಿಕಾ ತಂಡವು 50 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 296 ರನ್ ಕಲೆಹಾಕಿತು.
297 ರನ್ಗಳ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ತಂಡವು ಮೊದಲ ವಿಕೆಟ್ಗೆ 60 ರನ್ಗಳಿಸಿ ಉತ್ತಮ ಆರಂಭ ಪಡೆದುಕೊಂಡಿತ್ತು. ಆದರೆ ಈ ಹಂತದಲ್ಲಿ ದಾಳಿಗಿಳಿದ ಕೇಶವ್ ಮಹಾರಾಜ್ ಆಸೀಸ್ ಪಡೆಗೆ ಆಘಾತದ ಮೇಲೆ ಆಘಾತ ನೀಡಿದರು. ಅದರಲ್ಲೂ ಕೇವಲ 26 ಎಸೆತಗಳಲ್ಲಿ 5 ವಿಕೆಟ್ ಉರುಳಿಸುವ ಮೂಲಕ ಸೌತ್ ಆಫ್ರಿಕಾ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಅಂತಿಮವಾಗಿ ಆಸ್ಟ್ರೇಲಿಯಾ ತಂಡವು 40.5 ಓವರ್ಗಳಲ್ಲಿ 198 ರನ್ಗಳಿಸಿ ಆಲೌಟ್ ಆಯಿತು.
ಈ ಮೂಲಕ ಸೌತ್ ಆಫ್ರಿಕಾ ತಂಡವು 98 ರನ್ಗಳ ಅಮೋಘ ಗೆಲುವು ದಾಖಲಿಸಿದೆ. ಸೌತ್ ಆಫ್ರಿಕಾ ಪರ 10 ಓವರ್ಗಳನ್ನು ಎಸೆದ ಕೇಶವ್ ಮಹಾರಾಜ್ ಕೇವಲ 33 ರನ್ ನೀಡಿ 5 ವಿಕೆಟ್ ಕಬಳಿಸಿ ಗೆಲುವಿನ ರೂವಾರಿ ಎನಿಸಿಕೊಂಡರು.
