KFCC delegation meets CM: ಸಿದ್ದರಾಮಯ್ಯ ಭೇಟಿಗೆ ಬಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿಯೋಗ

ಅರುಣ್​ ಕುಮಾರ್​ ಬೆಳ್ಳಿ

Updated on: Jun 01, 2023 | 12:36 PM

ಹಿರಿಯ ನಟ ಸುಂದರ್ ರಾಜ್ ಮತ್ತು ಹಿರಿಯ ನಟ-ನಿರ್ಮಾಪಕ ಜೈ ಜಗದೀಶ್ ಅವರನ್ನು ಹರೀಶ್ ಜೊತೆ ನೋಡಬಹುದು.

ಬೆಂಗಳೂರು:  ಭಾ ಮ ಹರೀಶ್ (Bha Ma Harish) ನೇತೃತ್ವದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನಿಯೋಗವೊಂದು (KFCC delegation) ಇಂದು ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅವರ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿತು. ನಿಯೋಗದ ಸದಸ್ಯರೊಂದಿಗೆ ಹರೀಶ್ ಮುಖ್ಯಮಂತ್ರಿಗಳ ಮನೆಯತ್ತ ನಡೆದು ಬರುತ್ತಿರುವುದನ್ನು ವಿಡಿಯೋದಲ್ಲಿ ನೋಡಹುದು. ಹಿರಿಯ ನಟ ಸುಂದರ್ ರಾಜ್ (Sunder Raj) ಮತ್ತು ಹಿರಿಯ ನಟ ನಿರ್ಮಾಪಕ ಜೈ ಜಗದೀಶ್ ಅವರನ್ನು ಹರೀಶ್ ಜೊತೆ ನೋಡಬಹುದು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮತ್ತು ವಿವಾದಗಳ ನಡುವೆ ಭಾರೀ ನಂಟಿರೋದು ಕನ್ನಡಿಗರಿಗೆಲ್ಲ ಗೊತ್ತಿರುವ ಸಂಗತಿ. ಮೂಲಗಳ ಪ್ರಕಾರ ಕೆಲ ಬೇಡಿಕೆಗಳನ್ನು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲು ನಿಯೋಗ ಆಗಮಿಸಿದೆ.

ಮತ್ತಷ್ಟು ವಿಡಿಯೋ ಸುದ್ದಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.