AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KFCC Meeting On Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ

KFCC Meeting On Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ

ಮದನ್​ ಕುಮಾರ್​
|

Updated on: Jul 30, 2026 | 4:04 PM

Share

ಮುಖ್ಯಾಂಶಗಳು

  • ಕರ್ನಾಟಕ ಮತ್ತು ತಮಿಳುನಾಡು ನಡುವೆ ಮತ್ತೆ ಭುಗಿಲೆದ್ದ ಕಾವೇರಿ ನೀರು ವಿವಾದ.
  • ರೈತರ ಪರವಾಗಿ ನಿಲ್ಲುವುದಾಗಿ ತಿಳಿಸಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ.
  • ತಮಿಳುನಾಡಿಗೆ ನೀರು ಬಿಡಬಾರದು ಎಂದು ಕನ್ನಡಪರ ಸಂಘಟನೆಗಳ ಹೋರಾಟ.

ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡಬಾರದು ಎಂದು ಕನ್ನಡಪರ ಸಂಘಟನೆಗಳು ಹೋರಾಟ ಮಾಡುತ್ತಿವೆ. ಈ ಬಗ್ಗೆ ಚರ್ಚಿಸಲು ‘ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ’ ಇಂದು (ಜುಲೈ 30) ಸಭೆ ನಡೆಸುತ್ತಿದೆ. ಮಂಡಳಿ ಅಧ್ಯಕ್ಷರಾದ ಜಯಮಾಲಾ ಅವರು ಭಾಗಿಯಾಗಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..

ಕರ್ನಾಟಕ ಮತ್ತು ತಮಿಳುನಾಡು ನಡುವೆ ಕಾವೇರಿ ನದಿ ನೀರು (Cauvery Water) ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದ ಹೆಚ್ಚಾಗುತ್ತಿದೆ. ತಮಿಳುನಾಡಿಗೆ ನೀರು ಬಿಡಬಾರದು ಎಂದು ಕನ್ನಡಪರ ಸಂಘಟನೆಗಳು ಹೋರಾಟ ಮಾಡುತ್ತಿವೆ. ಇದೇ ವೇಳೆ ತಮಿಳುನಾಡು ಮುಖ್ಯಮಂತ್ರಿ ದಳಪತಿ ವಿಜಯ್ ಅವರು ನಟಿಸಿರುವ ‘ಜನ ನಾಯಗನ್’ ಸಿನಿಮಾ ಕರ್ನಾಟಕದ ಹಲವು ಕಡೆಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಕೆಲವು ಕಡೆಗಳಲ್ಲಿ ಈ ಸಿನಿಮಾದ ಪ್ರದರ್ಶನವನ್ನು ನಿಲ್ಲಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಇದರಿಂದಾಗಿ ಮಂಡ್ಯದಲ್ಲಿ ‘ಜನ ನಾಯಗನ್’ ಪ್ರದರ್ಶನ ರದ್ದಾಗಿದೆ. ಎಲ್ಲ ಸಂಘಟನೆಗಳು ಜೊತೆಯಾಗಿ ಕರ್ನಾಟಕ ಬಂದ್ ಮಾಡುವ ಬಗ್ಗೆಯೂ ಮಾತುಕಥೆ ನಡೆಯುತ್ತಿದೆ. ಈ ಎಲ್ಲ ವಿಚಾರಗಳ ಬಗ್ಗೆ ಚರ್ಚಿಸಲು ‘ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ’ ಇಂದು (ಜು.30) ಸಭೆ ನಡೆಸುತ್ತಿದೆ. ಮಂಡಳಿ ಅಧ್ಯಕ್ಷರಾದ ಜಯಮಾಲಾ ಅವರು ಸಭೆಯಲ್ಲಿ ಭಾಗಿಯಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us