ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ?

Updated on: Jun 17, 2025 | 10:51 PM

‘ಸಂಜು ವೆಡ್ಸ್ ಗೀತಾ 2’ ಸಿನಿಮಾದ ನಟಿ ರಚಿತಾ ರಾಮ್ ಅವರು ಪ್ರಚಾರಕ್ಕೆ ಬಂದಿಲ್ಲ. ಆದ್ದರಿಂದ ಅವರ ವಿರುದ್ಧ ದೂರು ನೀಡಲಾಗಿದೆ. ಈ ಕುರಿತು ಇಂದು (ಜೂನ್ 17) ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಚರ್ಚೆ ನಡೆದಿದೆ. ನಾಯಕ ನಟ ಶ್ರೀನಗರ ಕಿಟ್ಟಿ ಸೇರಿದಂತೆ ಚಿತ್ರತಂಡದ ಪ್ರಮುಖರು ಇದರಲ್ಲಿ ಭಾಗಿಯಾಗಿದ್ದಾರೆ.

‘ಸಂಜು ವೆಡ್ಸ್ ಗೀತಾ 2’ (Sanju Weds Geetha 2) ಚಿತ್ರದ ನಾಯಕಿ ರಚಿತಾ ರಾಮ್ ಅವರು ಪ್ರಚಾರಕ್ಕೆ ಬಾರದ ಕಾರಣ ಅವರ ವಿರುದ್ಧ ದೂರು ನೀಡಲಾಗಿದೆ. ಈ ಬಗ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಚರ್ಚೆ ಆಗಿದೆ. ನಾಯಕ ನಟ ಶ್ರೀನಗರ ಕಿಟ್ಟಿ (Srinagara Kitty) ಸೇರಿದಂತೆ ಚಿತ್ರತಂಡದ ಪ್ರಮುಖರು ಇದರಲ್ಲಿ ಭಾಗಿಯಾಗಿದ್ದಾರೆ. ಚಿತ್ರತಂಡದ ದೂರನ್ನು ವಾಣಿಜ್ಯ ಮಂಡಳು ಅಧ್ಯಕ್ಷ ನರಸಿಂಹಲು ಆಲಿಸಿದ್ದಾರೆ. ಅಲ್ಲದೇ, ಎದುರಾಗಿರುವ ಸಮಸ್ಯೆಯನ್ನು ಪರಿಹರಿಸುವುದಾಗಿ ಅವರು ಭರವಸೆ ನೀಡಿದ್ದಾರೆ. ನಿರ್ದೇಶಕ ನಾಗಶೇಖರ್, ನಿರ್ಮಾಪಕ ಛಲವಾದಿ ಕುಮಾರ್ ಅವರು ನಟಿ ರಚಿತಾ ರಾಮ್ (Rachita Ram) ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More