ಬಾಲ್ಯ ಸ್ನೇಹಿತನ ಮದುವೆಗೆ ಪತ್ನಿ ಸಮೇತ ಬಂದು ಹರಸಿದ ಯಶ್​; ಸಲಾಂ ರಾಕಿ ಭಾಯ್​ ಎಂದ ಫ್ಯಾನ್ಸ್​

Yash Friend Marriage: ಮೈಸೂರಿನ ಸಾ ರಾ ಕಲ್ಯಾಣ ಮಂಟಪದಲ್ಲಿ ಯಶ್​ ಸ್ನೇಹಿತ ಚೇತನ್​ ಅವರ ವಿವಾಹ ಸಮಾರಂಭ ನಡೆದಿದೆ. ರಾಧಿಕಾ ಪಂಡಿತ್​ ಜೊತೆ ‘ರಾಕಿಂಗ್​ ಸ್ಟಾರ್​’ ಯಶ್​ ಅವರು ಬಂದು ಬಾಲ್ಯ ಸ್ನೇಹಿತನಿಗೆ ವಿಶ್​ ಮಾಡಿದ್ದಾರೆ.

TV9kannada Web Team

| Edited By: Madan Kumar

May 13, 2022 | 7:46 AM

ಪ್ಯಾನ್​ ಇಂಡಿಯಾ ಸ್ಟಾರ್​ ಆಗಿ ಯಶ್​ ಮಿಂಚುತ್ತಿದ್ದಾರೆ. ಸದ್ಯ ಅವರು ‘ಕೆಜಿಎಫ್​: ಚಾಪ್ಟರ್​ 2’ (KGF 2) ಸಿನಿಮಾದ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಹೊಸ ಸಿನಿಮಾ ಕೈಗೆತ್ತಿಕೊಳ್ಳುವುದಕ್ಕೂ ಮುನ್ನ ಫ್ಯಾಮಿಲಿ ಜೊತೆ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಈಗ ಅವರು ತಮ್ಮ ಬಾಲ್ಯದ ಸ್ನೇಹಿತ ಚೇತನ್​ ಮದುವೆಗೆ ಹಾಜರಿ ಹಾಕಿದ್ದಾರೆ. ಪಟಾಕಿ ಸಿಡಿಸಿ ಅವರನ್ನು ಸ್ವಾಗತಿಸಲಾಯಿತು. ಮೈಸೂರಿನಲ್ಲಿ ನಡೆದ ಈ ವಿವಾಹ ಸಮಾರಂಭಕ್ಕೆ ಪತ್ನಿ ರಾಧಿಕಾ ಪಂಡಿತ್​ ಜೊತೆ ಆಗಮಿಸಿದ ಯಶ್​ (Yash) ಅವರನ್ನು ಕಂಡು ಫ್ಯಾನ್ಸ್​ ಕೇಕೆ ಹಾಕಿದರು. ಅವರ ಜೊತೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು. ನವಜೋಡಿಗೆ ಶುಭ ಹಾರೈಸಿದ ಬಳಿಕ ಯಶ್​ ಹಾಗೂ ರಾಧಿಕಾ (Radhika Pandit) ಅವರು ಅಭಿಮಾನಿಗಳತ್ತ ಕೈ ಬೀಸಿದರು. ಈ ಮದುವೆಗೆ ಅಭಿಷೇಕ್​ ಅಂಬರೀಷ್​ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಆಗಮಿಸಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

 

Follow us on

Click on your DTH Provider to Add TV9 Kannada