KGF Babu Vs RV Devraj: ದೇವರಾಜ್ ಪುತ್ರ ಯುವರಾಜ್​ನಿಂದ ಕೊಲೆ ಬೆದರಿಕೆ ಆರೋಪಿಸಿ ಪೊಲೀಸರಿಗೆ ದೂರು ಸಲ್ಲಿಸಿದ ಬಾಬು

ಅರುಣ್​ ಕುಮಾರ್​ ಬೆಳ್ಳಿ

Updated on: Feb 04, 2023 | 1:35 PM

ದೇವರಾಜ್ ಅವರ ಮಗ ಯುವರಾಜ್ ತನ್ನ ಬೆಂಬಲಿಗರೊಂದಿಗೆ ಸೇರಿ ತನ್ನನ್ನು ಕೊಲೆ ಮಾಡುವ ಬೆದರಿಕೆ ಹಾಕಿದ್ದಾನೆ. ಅವನ ಮತ್ತು ಅವನ ಸಂಗಡಿಗರ ವಿರುದ್ಧ ಪೊಲೀಸರಿಗೆ ದೂರು ಸಲ್ಲಿಸಿದ್ದೇನೆ ಎಂದು ಬಾಬು ಹೇಳಿದರು.

ಬೆಂಗಳೂರು:  ಕಾಂಗ್ರೆಸ್ ಪಕ್ಷದ ಹಿರಿಯ ಮತ್ತು ಪ್ರಮುಖ ನಾಯಕರ ನಡುವಿನ ಜಗಳ, ಮುನಿಸು ಮತ್ತು ಕೋಪ-ತಾಪಗಳು ಒಂದೆಡೆಯಾದರೆ ಎರಡನೇ ಹಂತದ ನಾಯಕರು ಕೂಡ ನಾವೇನು ಕಮ್ಮಿಯಿಲ್ಲ ಅನ್ನುವಂತಿದೆ ಮಾರಾಯ್ರೇ. ಕೆಜಿಎಫ್ ಬಾಬು (KGF Babu) ಮತ್ತು ಆರ್ ವಿ ದೇವರಾಜ್ (RV Devaraj) ನಡುವಿನ ವೈಷಮ್ಯಕ್ಕೆ ಬಹಳ ದಿನಗಳ ಇತಿಹಾಸವಿದೆ. ನಗರದಲ್ಲಿ ಇಂದು ಮಾಧ್ಯಮದವರೊಡನೆ ಮಾತಾಡಿದ ಬಾಬು, ದೇವರಾಜ್ ಅವರ ಮಗ ಯುವರಾಜ್ ತನ್ನ ಬೆಂಬಲಿಗರೊಂದಿಗೆ ಸೇರಿ ತನ್ನನ್ನು ಕೊಲೆ ಮಾಡುವ ಬೆದರಿಕೆ ಹಾಕಿದ್ದಾನೆ. ಅವನ ಮತ್ತು ಅವನ ಸಂಗಡಿಗರ ವಿರುದ್ಧ ಪೊಲೀಸರಿಗೆ ದೂರು (complaint) ಸಲ್ಲಿಸಿದ್ದೇನೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 04, 2023 01:35 PM
Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.