ಬಾಲಿವುಡ್ ಅಂಗಳಕ್ಕೆ ತೆರಳಿ ದಾಖಲೆ ಬರೆದ ‘ಕೆಜಿಎಫ್ 2’
ಎಲ್ಲಾ ದಾಖಲೆಗಳನ್ನು ಈ ಚಿತ್ರ ಪುಡಿಪುಡಿ ಮಾಡಿದೆ. ಮುಂದಿನ ದಿನಗಳಲ್ಲಿ ಈ ಚಿತ್ರ ಬಾಲಿವುಡ್ನಿಂದ 300 ಕೋಟಿ ಗಳಿಸಿದರೂ ಅಚ್ಚರಿ ಏನಿಲ್ಲ ಎನ್ನುತ್ತಿದ್ದಾರೆ ಬಾಲಿವುಡ್ ಮಂದಿ.
‘ಕೆಜಿಎಫ್ ಚಾಪ್ಟರ್ 2’ ಸಿನಿಮಾ (KGF Chapter 2) ಬಾಲಿವುಡ್ ಅಂಗಳದಲ್ಲಿ ಹಲವು ದಾಖಲೆಗಳನ್ನು ಬರೆಯುತ್ತಿದೆ. ಸಿನಿಮಾ ನೋಡಿದ ಅಭಿಮಾನಿಗಳು ಮರಳಿ ಚಿತ್ರಮಂದಿರದತ್ತ ಮುಖ ಮಾಡುತ್ತಿದ್ದಾರೆ. ಮುಂದಿನ ಎರಡು-ಮೂರು ವಾರಗಳ ಕಾಲ ಸಿನಿಮಾದ ಅಬ್ಬರ ಕಡಿಮೆ ಆಗೋದು ಅನುಮಾನವೇ. ಮೊದಲ ದಿನವೇ ಈ ಸಿನಿಮಾ ಹಿಂದಿ ಬಾಕ್ಸ್ ಆಫೀಸ್ನಲ್ಲಿ ಹೊಸ ದಾಖಲೆ ಬರೆದಿದೆ. ಮೊದಲ ದಿನ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಹಿಂದಿ ಸಿನಿಮಾ ಎಂಬ ಖ್ಯಾತಿ ‘ಕೆಜಿಎಫ್ 2’ಗೆ ಸಿಕ್ಕಿದೆ. ಯಶ್ (Yash) ಚಿತ್ರದ ಅಬ್ಬರಕ್ಕೆ ಬಾಲಿವುಡ್ (Bollywood) ನಲುಗಿ ಹೋಗಿದೆ. ಎಲ್ಲಾ ದಾಖಲೆಗಳನ್ನು ಈ ಚಿತ್ರ ಪುಡಿಪುಡಿ ಮಾಡಿದೆ. ಮುಂದಿನ ದಿನಗಳಲ್ಲಿ ಈ ಚಿತ್ರ ಬಾಲಿವುಡ್ನಿಂದ 300 ಕೋಟಿ ಗಳಿಸಿದರೂ ಅಚ್ಚರಿ ಏನಿಲ್ಲ ಎನ್ನುತ್ತಿದ್ದಾರೆ ಬಾಲಿವುಡ್ ಮಂದಿ.
ಇದನ್ನೂ ಓದಿ: ಅಮೆರಿಕದಲ್ಲಿ ಶೂಟ್ ಆಗಲಿದೆ ‘ಕೆಜಿಎಫ್ ಚಾಪ್ಟರ್ 3’?; ಇಲ್ಲಿದೆ ಹಲವು ಅಚ್ಚರಿಯ ವಿಚಾರಗಳು
Srinidhi Shetty: ಹಳದಿ ಉಡುಗೆಯಲ್ಲಿ ಗಮನ ಸೆಳೆದ ‘ಕೆಜಿಎಫ್ 2’ ಬೆಡಗಿ ಶ್ರೀನಿಧಿ ಶೆಟ್ಟಿ
Latest Videos