‘ಕೆಜಿಎಫ್: ಚಾಪ್ಟರ್ 2’ ರಿಲೀಸ್ ಹೊಸ್ತಿಲಲ್ಲಿ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವರ ದರ್ಶನ ಪಡೆದ ಯಶ್
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಯಶ್ ಅವರು ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಅವರು ದೇವಾಲಯ ಪ್ರವೇಶಿಸುತ್ತಿರುವ ವಿಡಿಯೋ ಇಲ್ಲಿದೆ..
ಬಹುನಿರೀಕ್ಷಿತ ‘ಕೆಜಿಎಫ್: ಚಾಪ್ಟರ್ 2’ (KGF Chapter 2) ಸಿನಿಮಾದ ಬಿಡುಗಡೆಗೆ ದಿನಗಣನೆ ಆರಂಭ ಆಗಿದೆ. ಏ.14ರಂದು ಈ ಚಿತ್ರ ವಿಶ್ವಾದ್ಯಂತ ರಿಲೀಸ್ ಆಗಲಿದೆ. ಕನ್ನಡ, ತೆಲುಗು, ಮಲಯಾಳಂ, ಹಿಂದಿ, ತಮಿಳು ಭಾಷೆಗಳಲ್ಲಿ ಬಿಡುಗಡೆ ಆಗಲಿರುವ ‘ಕೆಜಿಎಫ್ 2’ ಚಿತ್ರವನ್ನು ನೋಡಲು ದೇಶಾದ್ಯಂತ ಇರುವ ಯಶ್ (Yash) ಅಭಿಮಾನಿಗಳು ಕಾದಿದ್ದಾರೆ. ಈ ಚಿತ್ರ ದೊಡ್ಡ ಮಟ್ಟದಲ್ಲಿ ಯಶಸ್ಸು ಕಾಣಬೇಕು ಎಂಬುದು ಎಲ್ಲರ ಆಶಯ. ಈ ಸಂದರ್ಭದಲ್ಲಿ ಯಶ್ ಅವರು ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ, ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ (Kukke Subramanya Temple) ದೇವಸ್ಥಾನಕ್ಕೆ ಅವರು ಭಾನುವಾರ (ಏ.10) ತೆರಳಿ ಪೂಜೆ ಸಲ್ಲಿಸಿದ್ದಾರೆ. ಅವರು ದೇವಾಲಯ ಪ್ರವೇಶಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಯಶ್ ಆಗಮನದ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿತ್ತು. ‘ಕೆಜಿಎಫ್: ಚಾಪ್ಟರ್ 2’ ಸಿನಿಮಾಗೆ ಪ್ರಶಾಂತ್ ನೀಲ್ ನಿರ್ದೇಶನ ಮಾಡಿದ್ದು, ‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆಯ ವಿಜಯ್ ಕಿರಗಂದೂರು ಬಂಡವಾಳ ಹೂಡಿದ್ದಾರೆ.
ಇದನ್ನೂ ಓದಿ:
ಯಶ್ ಮಾತ್ರವಲ್ಲ, ಫ್ಯಾನ್ಸ್ ಕೂಡ ಮಾಡ್ತಿದ್ದಾರೆ ದಾಖಲೆ; ಸಿದ್ಧವಾಗ್ತಿದೆ ಅತಿ ದೊಡ್ಡ ಮೊಸಾಯಿಕ್ ಪೋಟ್ರೇಟ್
ಯಶ್, ಪ್ರಶಾಂತ್ ಅವರನ್ನು ಸಂದರ್ಶನ ಮಾಡಿದ ಬಾಲಿವುಡ್ ಸ್ಟಾರ್ ನಟ; ಇಲ್ಲಿದೆ ವಿಡಿಯೋ
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್

