ಕಾರ್ಯಕರ್ತರ ಮನೆ ಮೇಲೆ ಅಧಿಕಾರಿಗಳಿಂದ ನಡೆಯುತ್ತಿರುವ ದಾಳಿ ವಿರೋಧಿಸಿ ಕೆಜಿಎಫ್ ಶಾಸಕಿ ರೂಪಾ ಶಶಿಧರ್ ಪ್ರತಿಭಟನೆ

Updated on: Mar 17, 2023 | 4:44 PM

ಕಳೆದ ವಾರ ಗೋದಾಮಿನ ಮೇಲೆ ದಾಳಿ ನಡೆಸಿ ಫುಡ್​ಕಿಟ್​​​ಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ, ಅದಾದ ಬಳಿಕ ಪಕ್ಷದ ಕಾರ್ಯಕರ್ತರ ಮನೆಗಳ ಮೇಲೆ ದಾಳಿ ನಡೆಸಲಾಗುತ್ತಿದೆ ಎಂದು ರೂಪಾ ಹೇಳಿದರು.

ಕೋಲಾರ: ಕಾಂಗ್ರೆಸ್ ಪಕ್ಷದ ಕೆಜಿಎಫ್ ಕ್ಷೇತ್ರದ ಶಾಸಕಿ ರೂಪಾ ಶಶಿಧರ್ (Roopa Shashidhar) ಶುಕ್ರವಾರದಂದು ಬೇತಮಂಗಲ ಪೊಲೀಸ್ ಠಾಣೆ (Betha Mangala police station) ಎದುರು ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದರು. ಅವರೇ ಹೇಳುವ ಪ್ರಕಾರ ಅಧಿಕಾರಿಗಳಿಂದ ಅವರಿಗೆ ಮತ್ತು ಅವರ ಬೆಂಬಲಿಗರಿಗೆ ಕಿರುಕುಳ ದಿನೇದಿನ ಹೆಚ್ಚುತ್ತಿದೆ. ಯುಗಾದಿ ಹಬ್ಬಕ್ಕೆ (Ugadi festival) ಜನರ ನಡುವೆ ಹಂಚಲು ಫುಡ್ ಕಿಟ್ ಗಳನ್ನು ತರಿಸಿ ಸಂಬಂಧಿಕರೊಬ್ಬರ ಗೋದಾಮಿನಲ್ಲಿ ಇಟ್ಟಿದ್ದರಂತೆ. ಆದರೆ ಕಳೆದ ವಾರ ಗೋದಾಮಿನ ಮೇಲೆ ದಾಳಿ ನಡೆಸಿ ಅವುಗಳನ್ನು ವಶಪಡಿಸಿಕೊಂಡಿದ್ದಾರೆ. ಅದಾದ ಬಳಿಕ ಪಕ್ಷದ ಕಾರ್ಯಕರ್ತರ ಮನೆಗಳ ಮೇಲೆ ದಾಳಿ ನಡೆಸಲಾಗುತ್ತಿದೆ ಎಂದು ರೂಪಾ ಹೇಳಿದರು. ಅಧಿಕಾರಿಗಳ ಕಿರುಕುಳ ನಿಲ್ಲದ ಹೊರತು ತಮ್ಮ ಪ್ರತಿಭಟನೆ ನಿಲ್ಲದು ಎಂದು ಶಾಸಕಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More