AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಶೌಚಾಲಯದಲ್ಲೇ ಅಡುಗೆ, ಊಟ ಮಾಡುತ್ತಿದ್ದ ಉತ್ತರ ಭಾರತದ ವ್ಯಕ್ತಿ!

ಕೋಲಾರ: ಶೌಚಾಲಯದಲ್ಲೇ ಅಡುಗೆ, ಊಟ ಮಾಡುತ್ತಿದ್ದ ಉತ್ತರ ಭಾರತದ ವ್ಯಕ್ತಿ!

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on:Aug 31, 2026 | 12:11 PM

Share

ಕೋಲಾರ ಜಿಲ್ಲೆಯ ಕೆಜಿಎಫ್ ಮುನಿಸಿಪಲ್ ಬಸ್ ನಿಲ್ದಾಣದ ಶೌಚಾಲಯದಲ್ಲೇ ವ್ಯಕ್ತಿಯೊಬ್ಬ ವಾಸವಿದ್ದು ಅಡುಗೆ ಮಾಡಿಕೊಳ್ಳುತ್ತಿದ್ದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಶೌಚಾಲಯ ನಿರ್ವಹಣೆಗೆ ಅನಧಿಕೃತವಾಗಿ ನೇಮಕಗೊಂಡಿದ್ದ ಈ ವ್ಯಕ್ತಿಯ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ, ನಗರಸಭೆ ಅಧಿಕಾರಿಗಳು ಆತನನ್ನು ಹೊರಹಾಕಿ ಶೌಚಾಲಯಕ್ಕೆ ಬೀಗ ಹಾಕಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಕೋಲಾರ, ಆಗಸ್ಟ್ 31: ಜಿಲ್ಲೆಯ ಕೆಜಿಎಫ್‌ ಮುನಿಸಿಪಲ್ ಬಸ್ ನಿಲ್ದಾಣದಲ್ಲಿ ಅಮಾನವೀಯ ಘಟನೆಯೊಂದು ವರದಿಯಾಗಿದೆ. ಶೌಚಾಲಯ ನಿರ್ವಹಣೆಗಾಗಿ ನಗರಸಭೆ ಸಿಬ್ಬಂದಿಯಿಂದ ಅನಧಿಕೃತವಾಗಿ ನೇಮಕಗೊಂಡಿದ್ದ ಉತ್ತರ ಭಾರತ ಮೂಲದ ವ್ಯಕ್ತಿಯೊಬ್ಬ, ಅದೇ ಶೌಚಾಲಯದಲ್ಲಿ ವಾಸವಾಗಿದ್ದುಕೊಂಡು ಅಲ್ಲೇ ಅಡುಗೆ ಮಾಡಿ ಊಟ ಮಾಡುತ್ತಿದ್ದ. ಈ ಅನಾಗರಿಕ ಕೃತ್ಯದ ಕುರಿತು ಸಾರ್ವಜನಿಕರಿಂದ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ತಕ್ಷಣವೇ ಕಾರ್ಯಪ್ರವೃತ್ತರಾದ ಕೆಜಿಎಫ್ ನಗರಸಭೆ ಅಧಿಕಾರಿಗಳು, ಆ ವ್ಯಕ್ತಿಯನ್ನು ಶೌಚಾಲಯದಿಂದ ಹೊರಹಾಕಿ ಕಟ್ಟಡಕ್ಕೆ ಬೀಗ ಜಡಿದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Aug 31, 2026 12:09 PM

Follow Us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More