ಮಗಳಿಗೆ ಮಂತ್ರಿಗಿರಿ ಸಿಗುತ್ತಾ?: ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ ನೀಡಿದ​​ ಕೆ.ಹೆಚ್. ಮುನಿಯಪ್ಪ

Updated on: May 31, 2026 | 4:05 PM

ಕೆ.ಹೆಚ್. ಮುನಿಯಪ್ಪ ಅವರು ತಮ್ಮ ಪುತ್ರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಬೆಂಗಳೂರಿನಲ್ಲಿ ಹೇಳಿದ್ದಾರೆ. 30 ವರ್ಷಗಳ ಅನುಭವವಿರುವ ಮುನಿಯಪ್ಪ, ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುವುದಾಗಿ ತಿಳಿಸಿದ್ದಾರೆ. ಸಿದ್ದರಾಮಯ್ಯ ನೇತೃತ್ವಕ್ಕೆ ಧನ್ಯವಾದ ಅರ್ಪಿಸಿದ್ದು, 2028ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು, ಮೇ.31: ಮಾಜಿ ಸಚಿವ ಕೆ.ಹೆಚ್. ಮುನಿಯಪ್ಪ ಅವರು ತಮ್ಮ ಪುತ್ರಿಗೆ ಸಂಪುಟದಲ್ಲಿ ಸ್ಥಾನ ನೀಡುವ ವಿಚಾರವಾಗಿ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಬೆಂಗಳೂರಿನಲ್ಲಿ ಸ್ಪಷ್ಟಪಡಿಸಿದ್ದಾರೆ. ಅವರು, “ಕೇಂದ್ರದಲ್ಲಿ 30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ನನಗೆ ಯಾವುದೇ ಡಿಫರೆನ್ಸ್ ಇಲ್ಲ. ಹೈಕಮಾಂಡ್ ಏನು ತೀರ್ಮಾನವನ್ನು ತೆಗೆದುಕೊಳ್ಳುತ್ತದೋ ಅದಕ್ಕೆ ನಾವು ಬದ್ಧರಾಗಿರುತ್ತೇವೆ” ಎಂದು ಹೇಳಿದ್ದಾರೆ. ಇತ್ತೀಚೆಗೆ, ಮುನಿಯಪ್ಪ ಅವರ ಪುತ್ರಿ ರೂಪಾ ಶಶಿಧರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ಬಗ್ಗೆ ಕೇಳಿದಾಗ, ಅವರು ಮತ್ತೊಮ್ಮೆ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರುವುದಾಗಿ ಪುನರುಚ್ಚರಿಸಿದರು. ಒಟ್ಟಾರೆ, ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಉತ್ತಮ ಬದಲಾವಣೆಯಾಗಿದೆ ಎಂದು ಮುನಿಯಪ್ಪ ತಿಳಿಸಿದ್ದಾರೆ. “ಸನ್ಮಾನ್ಯ ಸಿದ್ದರಾಮಯ್ಯನವರಿಗೆ ನಾವು ವಿಶೇಷವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇವೆ. ಒಬ್ಬ ವ್ಯಕ್ತಿ ತಾನು ಅಧಿಕಾರದಲ್ಲಿದ್ದಾಗ ಇಷ್ಟು ಸಮಾಧಾನವಾಗಿ ಅವರೇ ಪ್ರಪೋಸ್ ಮಾಡಿ ಕೆಲಸ ಮಾಡಿದಕ್ಕೆ ಅವರಿಗೆ ನಾವು ಎಷ್ಟು ಧನ್ಯವಾದಗಳನ್ನು ಹೇಳಿದರೂ ಸಾಲದು” ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪಾರ್ಟಿಯು ಸುಗಮವಾಗಿ ನಡೆಯಲಿದ್ದು, ಅವರ ನೇತೃತ್ವದಲ್ಲಿ 2028ಕ್ಕೆ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವನ್ನು ಕೆ.ಹೆಚ್. ಮುನಿಯಪ್ಪ ಹೊಂದಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More