ನಾಯಿ ವೇಷ ಧರಿಸಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ; ಕಾರಣ ಏನು ಗೊತ್ತಾ?
ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ಬೀದಿ ನಾಯಿಗಳ ಉಪಟಳ ತೀವ್ರವಾಗಿದೆ. ಇದನ್ನು ಖಂಡಿಸಿ, ಸಾರ್ವಜನಿಕರೊಬ್ಬರು ಜಿಲ್ಲಾಧಿಕಾರಿ ಕಚೇರಿಯ ಸಭೆಗೆ ನಾಯಿಯ ವೇಷ ಧರಿಸಿ ವಿಶಿಷ್ಟ ಪ್ರತಿಭಟನೆ ನಡೆಸಿದ್ದಾರೆ. ದಿನೇ ದಿನೆ ಹೆಚ್ಚುತ್ತಿರುವ ನಾಯಿ ದಾಳಿ ಮತ್ತು ಭಯದ ವಾತಾವರಣವನ್ನು ಅಧಿಕಾರಿಗಳ ಗಮನಕ್ಕೆ ತರಲು ಈ ಸಾಂಕೇತಿಕ ಹೋರಾಟ ಮಾಡಿದ್ದಾರೆ. ಈ ವಿಶಿಷ್ಟ ಪ್ರತಿಭಟನೆ ಸದ್ಯ ದೇಶಾದ್ಯಂತ ಸುದ್ದಿಯಾಗಿದ್ದು, ನಾಯಿಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹಿಸಿದೆ.
ಖಾಂಡ್ವಾ, ಆ.19: ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ಬೀದಿ ನಾಯಿಗಳ ಉಪಟಳ ಹೆಚ್ಚಾಗುತ್ತಿರುವುದನ್ನು ಖಂಡಿಸಿ ಸಾರ್ವಜನಿಕರೊಬ್ಬರು ನಡೆಸಿದ ವಿಶಿಷ್ಟ ಮಾದರಿಯ ಪ್ರತಿಭಟನೆ ಸದ್ಯ ದೇಶಾದ್ಯಂತ ಸುದ್ದಿಯಾಗಿದೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ ಸಭೆಗೆ ವ್ಯಕ್ತಿಯೊಬ್ಬರು ನಾಯಿಯ ವೇಷ ಧರಿಸಿ ಆಗಮಿಸುವ ಮೂಲಕ ಅಧಿಕಾರಿಗಳು ಹಾಗೂ ಸ್ಥಳೀಯರ ಗಮನ ಸೆಳೆದಿದ್ದಾರೆ. ಖಾಂಡ್ವಾ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಬೀದಿ ನಾಯಿಗಳ ದಾಳಿ ಮತ್ತು ಭಯದ ವಾತಾವರಣದ ವಿರುದ್ಧ ಅಧಿಕಾರಿಗಳ ಗಮನ ಸೆಳೆಯಲು ಈ ಪ್ರತಿಭಟನೆ ನಡೆಸಲಾಯಿತು. ಕುಂದುಕೊರತೆ ಸಭೆಗೆ ನಾಯಿಯ ಕಾಸ್ಟ್ಯೂಮ್ ಧರಿಸಿ ಬಂದ ಪ್ರತಿಭಟನಾಕಾರನನ್ನು ಕಂಡು ಆಡಳಿತಾಧಿಕಾರಿಗಳು ಹಾಗೂ ಸಾರ್ವಜನಿಕರು ಆಶ್ಚರ್ಯಚಕಿತರಾದರು. ನಾಯಿಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದಿದ್ದರೆ ಸಾರ್ವಜನಿಕರ ಜೀವನ ನೆಮ್ಮದಿಯಿಂದಿರಲು ಸಾಧ್ಯವಿಲ್ಲ ಎಂಬುದನ್ನು ಸಾಂಕೇತಿಕವಾಗಿ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಡಲು ಈ ಹಾದಿ ತುಳಿದಿದ್ದಾಗಿ ತಿಳಿಸಲಾಗಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ