‘ಮಾರ್ಕ್’ ಸಿನಿಮಾ ಟ್ರೇಲರ್ ಬಿಡುಗಡೆ ಕಾರ್ಯಕ್ರಮ: ಲೈವ್ ವಿಡಿಯೋ ನೋಡಿ..

Updated on: Dec 07, 2025 | 1:13 PM

ಕ್ರಿಸ್ಮಸ್ ಪ್ರಯುಕ್ತ ಡಿಸೆಂಬರ್ 25ರಂದು ‘ಮಾರ್ಕ್’ ಸಿನಿಮಾ ಬಿಡುಗಡೆ ಆಗಲಿದೆ. ಇಂದು (ಡಿಸೆಂಬರ್ 7) ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್, ಆರ್. ಚಂದ್ರು, ಎ.ಪಿ. ಅರ್ಜುನ್, ರಾಕ್ ಲೈನ್ ವೆಂಕಟೇಶ್, ಜೆಕೆ, ಜೋಗಿ ಪ್ರೇಮ್ ಮುಂತಾದವರು ಭಾಗಿಯಾಗಿದ್ದಾರೆ.

ಕ್ರಿಸ್ಮಸ್ ಪ್ರಯುಕ್ತ ಡಿಸೆಂಬರ್ 25ರಂದು ‘ಮಾರ್ಕ್’ ಸಿನಿಮಾ (Mark Movie) ಬಿಡುಗಡೆ ಆಗಲಿದೆ. ಇಂದು (ಡಿಸೆಂಬರ್ 7) ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ (Kiccha Sudeep), ಆರ್. ಚಂದ್ರು, ಎ.ಪಿ. ಅರ್ಜುನ್, ರಾಕ್ ಲೈನ್ ವೆಂಕಟೇಶ್, ಜೆಕೆ, ಜೋಗಿ ಪ್ರೇಮ್ ಮುಂತಾದವರು ಭಾಗಿಯಾಗಿದ್ದಾರೆ. ಟ್ರೇಲರ್ ನೋಡಿದ ಈ ಎಲ್ಲ ಸೆಲೆಬ್ರಿಟಿಗಳು ವಾವ್ ಎಂದಿದ್ದಾರೆ. ‘ಮಾರ್ಕ್’ ಸಿನಿಮಾಗೆ ವಿಜಯ್ ಕಾರ್ತಿಕೇಯನ್ ನಿರ್ದೇಶನ ಮಾಡಿದ್ದಾರೆ. ಅದ್ದೂರಿ ಬಜೆಟ್​​ನಲ್ಲಿ ಸಿನಿಮಾ ನಿರ್ಮಾಣ ಆಗಿದೆ. ಸಿನಿಮಾದ ಬಗ್ಗೆ ಎಲ್ಲರೂ ಮಾತನಾಡಿದ್ದಾರೆ. ಟ್ರೇಲರ್ ಬಿಡುಗಡೆ ಕಾರ್ಯಕ್ರಮದ ಲೈವ್ ವಿಡಿಯೋ ಇಲ್ಲಿದೆ ನೋಡಿ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More