ಅಂಗ ಮತ್ತು ಅಂಗಾಂಶ ದಾನ ಮಾಡಿದ ಪ್ರಿಯಾ ಸುದೀಪ್: ಅಭಿಮಾನಿಗಳಲ್ಲೂ ಮನವಿ
ನಟ ಸುದೀಪ್ ಅವರು ಇತ್ತೀಚೆಗೆ 52ನೇ ವರ್ಷದ ಜನ್ಮದಿನ ಆಚರಿಸಿಕೊಂಡರು. ಈ ಪ್ರಯುಕ್ತ ಅವರ ಪತ್ನಿ ಪ್ರಿಯಾ ಸುದೀಪ್ ಒಂದು ಮಹತ್ವದ ಕಾರ್ಯ ಮಾಡಿದ್ದಾರೆ. ಅಂಗ ಹಾಗೂ ಅಂಗಾಂಶ ದಾನಕ್ಕೆ ಪ್ರಿಯಾ ನೋಂದಣಿ ಮಾಡಿಸಿದ್ದಾರೆ. ವಿಡಿಯೋ ಮೂಲಕ ಈ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.
ಕಿಚ್ಚ ಸುದೀಪ್ (Kichcha Sudeep) ಅವರು ಇತ್ತೀಚೆಗೆ 52ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡರು. ಈ ಪ್ರಯುಕ್ತ ಅವರ ಪತ್ನಿ ಪ್ರಿಯಾ ಸುದೀಪ್ ಒಂದು ಮಹತ್ವದ ಕಾರ್ಯ ಮಾಡಿದ್ದಾರೆ. ಅಂಗ ಮತ್ತು ಅಂಗಾಂಶ ದಾನಕ್ಕೆ (Organ and Tissue Donation) ಅವರು ನೋಂದಣಿ ಮಾಡಿಸಿದ್ದಾರೆ. ಈ ಬಗ್ಗೆ ವಿಡಿಯೋ ಮೂಲಕ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಕೂಡ ಈ ಕಾರ್ಯದಲ್ಲಿ ಕೈ ಜೋಡಿಸುವಂತೆ ಅವರು ಮನವಿ ಮಾಡಿದ್ದಾರೆ. ‘ನಿಮ್ಮ ಒಂದು ಸಣ್ಣ ನಿರ್ಧಾರದಿಂದ ಒಂದು ಜೀವ ಉಳಿಯುತ್ತದೆ. ಅದಕ್ಕಿಂತ ದೊಡ್ಡ ಕೆಲಸ ಬೇರೊಂದಿಲ್ಲ’ ಎಂದು ಪ್ರಿಯಾ ಸುದೀಪ್ (Priya Sudeep) ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

