ಒಂದೇ ವೇದಿಕೆ ಮೇಲೆ ಉಪೇಂದ್ರ ಹಾಗೂ ಸುದೀಪ್​

| Updated By: ರಾಜೇಶ್ ದುಗ್ಗುಮನೆ

Updated on: Sep 13, 2021 | 7:27 PM

ಈ ಕಾರ್ಯಕ್ರಮದಲ್ಲಿ ‘‌1980’ ಸಿನಿಮಾ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಸುದೀಪ್ ಹಾಗೂ ಉಪೇಂದ್ರ ಒಂದೇ ವೇದಿಕೆ ಮೇಲೆ ಕಾಣಿಸಿಕೊಳ್ಳುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಪ್ರಿಯಾಂಕಾ ಉಪೇಂದ್ರ ಅಭಿನಯದ ‘‌1980’ ಸಿನಿಮಾದ ಟ್ರೇಲರ್ ಬಿಡುಗಡೆ ಸಮಾರಂಭ ಚಾಮರಾಜಪೇಟೆಯ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ಆಯೋಜಿಸಲಾಗಿದೆ.  ಈ ಸಮಾರಂಭಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ‘‌1980’ ಸಿನಿಮಾ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಸುದೀಪ್ ಹಾಗೂ ಉಪೇಂದ್ರ ಒಂದೇ ವೇದಿಕೆ ಮೇಲೆ ಕಾಣಿಸಿಕೊಳ್ಳುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ. ಇಬ್ಬರೂ ಕಬ್ಜಾ ಸಿನಿಮಾದಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು.

ಇದನ್ನೂ ಓದಿ: ಕೊರೊನಾಗೆ ಸೆಡ್ಡು ಹೊಡೆದು ಹಳೇ ಚಾರ್ಮ್​ ಪಡೆದ ಸುದೀಪ್​; ಫೋಟೋ ನೋಡಿ ವಾವ್​ ಎಂದ ಫ್ಯಾನ್ಸ್​

Published on: Sep 13, 2021 07:24 PM