ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್
ಗಂಧರ್ವರು ರಾಕ್ಷಸರಾಗಿ ಆ ಬಳಿಕ ಕಟುಕರಾದರು ಎಂದು ಸುದೀಪ್ ಹೇಳಿದ್ದಾರೆ. ಈ ವಾರ ಕಟುಕರಿಗೆ ಮಾರಿ ಹಬ್ಬ ಇದೆ ಎನ್ನುವ ಎಚ್ಚರಿಕೆಯನ್ನು ರವಾನಿಸಿದ್ದಾರೆ.
ಈ ವಾರ ಬಿಗ್ ಬಾಸ್ನಲ್ಲಿ (Bigg Boss) ನಡೆದ ಘಟನೆಗಳು ಯಾರೂ ಒಪ್ಪುವಂಥದ್ದಲ್ಲ. ಎದುರಾಳಿಗಳು ಮಾಡಿದ ತಪ್ಪಿಗೆ ಇಬ್ಬರು ಆಸ್ಪತ್ರೆ ಸೇರಿದ್ದಾರೆ. ಪ್ರತಾಪ್ ಮರಳಿದ್ದು, ಸಂಗೀತಾ ಅವರಿನ್ನೂ ಆಸ್ಪತ್ರೆಯಲ್ಲೇ ಇದ್ದಾರೆ ಎಂದು ಹೇಳಲಾಗುತ್ತಿದೆ. ಈ ಎಲ್ಲಾ ವಿಚಾರಕ್ಕೆ ಸಂಬಂಧಿಸಿದಂತೆ ಸುದೀಪ್ ಕ್ಲಾಸ್ ತೆಗೆದುಕೊಳ್ಳುವ ನಿರೀಕ್ಷೆ ಇತ್ತು. ಅದು ನಿಜವಾಗಿದೆ. ಇದರ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಗಂಧರ್ವರು ರಾಕ್ಷಸರಾಗಿ ಆ ಬಳಿಕ ಕಟುಕರಾದರು ಎಂದು ಸುದೀಪ್ ಹೇಳಿದ್ದಾರೆ. ಈ ವಾರ ಕಟುಕರಿಗೆ ಮಾರಿ ಹಬ್ಬ ಇದೆ ಎನ್ನುವ ಎಚ್ಚರಿಕೆಯನ್ನು ರವಾನಿಸಿದ್ದಾರೆ. ಕಲರ್ಸ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ರಾತ್ರಿ 9 ಗಂಟೆಗೆ ಎಪಿಸೋಡ್ ಪ್ರಸಾರ ಕಾಣಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Dec 09, 2023 02:19 PM
Latest Videos