‘ಬಿಗ್ ಬಾಸ್ ಕನ್ನಡ ಸೀಸನ್ 11’ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಈ ಸೀಸನ್ ಬಗ್ಗೆ ಮಾಹಿತಿ ನೀಡಲು ಇಂದು (ಸೆ.23) ಸುದ್ದಿಗೋಷ್ಠಿ ಆಯೋಜಿಸಲಾಗಿತ್ತು. ಈ ಬಾರಿ ನಿಮ್ಮ ಸಂಭಾವನೆ ಎಷ್ಟು ಎಂದು ಕೇಳಿದಕ್ಕೆ ಸುದೀಪ್ ಈ ರೀತಿ ಉತ್ತರ ನೀಡಿದ್ದಾರೆ. ‘ನನ್ನ ತಟ್ಟೆ ಇಷ್ಟು ಅಗಲ ಇದೆಯೋ ಅಷ್ಟೇ ನಾನು ಊಟ ಮಾಡೋದು. ನನ್ನ ಯೋಗ್ಯತೆ ಎಷ್ಟು ಇದೆಯೋ ಅಷ್ಟೇ ದುಡಿಯೋದು. ಇದು ಹೊಸ ಅಧ್ಯಾಯ. ಎಲ್ಲದಕ್ಕೂ ಒಂದು ಮಾರ್ಕೆಟ್ ಇರುತ್ತದೆ. ಅದನ್ನು ನಾವು ಅರ್ಥ ಮಾಡಿಕೊಳ್ಳಬೇಕು’ ಎಂದು ಸುದೀಪ್ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.