Kichcha Sudeep: ಪುಣ್ಯಕೋಟಿ ದತ್ತು ಯೋಜನೆಗೆ ಸುದೀಪ್ ರಾಯಭಾರಿ; 31 ಗೋವು ದತ್ತು ಪಡೆಯಲು ಮುಂದಾದ ಕಿಚ್ಚ
ಸುದೀಪ್ ಅವರ ಮನೆಯಲ್ಲಿ ಗೋಪೂಜೆ ಮಾಡಲಾಗಿದೆ. ಈ ವೇಳೆ ಮಾತನಾಡಿದ ಸುದೀಪ್ ಅವರು 31 ಗೋವುಗಳನ್ನು ದತ್ತು ಪಡೆಯುವುದಾಗಿ ತಿಳಿಸಿದ್ದಾರೆ.
ಖ್ಯಾತ ನಟ ಕಿಚ್ಚ ಸುದೀಪ್ (Kichcha Sudeep) ಅವರನ್ನು ಪುಣ್ಯಕೋಟಿ ದತ್ತು ಯೋಜನೆಗೆ ರಾಯಭಾರಿಯನ್ನಾಗಿ ಮಾಡಲಾಗಿದೆ. ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ (Prabhu Chauhan) ಅವರು ರಾಯಭಾರಿ ನೇಮಕಾತಿ ಪತ್ರವನ್ನು ಇಂದು (ನ.24) ವಿತರಿಸಿದ್ದಾರೆ. ಬೆಂಗಳೂರಿನ ಜೆ.ಪಿ. ನಗರದಲ್ಲಿರುವ ಸುದೀಪ್ ಅವರ ಮನೆಯಲ್ಲಿ ಗೋಪೂಜೆ ಮಾಡಲಾಗಿದೆ. ಈ ವೇಳೆ ಮಾತನಾಡಿದ ಸುದೀಪ್ ಅವರು 31 ಗೋವುಗಳನ್ನು ದತ್ತು ಪಡೆಯುವುದಾಗಿ ತಿಳಿಸಿದ್ದಾರೆ. ಸರ್ಕಾರಿ ಗೋಶಾಲೆಗಳಲ್ಲಿ ಪ್ರತಿ ಜಿಲ್ಲೆಗೊಂದರಂತೆ 31 ಗೋವು ದತ್ತು ಪಡೆಯುವ ನಿರ್ಧಾರಕ್ಕೆ ಅವರು ಬಂದಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.