‘ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ’; ಮಗುವಿಗಾಗಿ ಮಿಡಿದ ಕಿಚ್ಚನ ಹೃದಯ

Updated on: Mar 31, 2025 | 1:21 PM

ಕಿಚ್ಚ ಸುದೀಪ್ ಅವರದ್ದು ದೊಡ್ಡ ಹೃದಯ. ಅವರು ನಿಂತಲ್ಲೆ ಅನೇಕರಿಗೆ ಸಹಾಯ ಮಾಡುವ ಗುಣ ಹೊಂದಿದ್ದಾರೆ. ಈಗ ಅವರು ಒಂದು ಮಗುವಿಗಾಗಿ ಮಿಡಿದ್ದಾರೆ. ತಾವು ಸಹಯಾ ಮಾಡಿದ್ದೂ ಅಲ್ಲದೆ, ಅಭಿಮಾನಿಗಳ ಬಳಿಯೂ ಸಹಾಯ ಮಾಡುವಂತೆ ಮನವಿ ಮಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ಖ್ಯಾತ ನಟ ಕಿಚ್ಚ ಸುದೀಪ್  (Kichcha Sudeep) ಕೇವಲ ಹೀರೋ ಮಾತ್ರವಲ್ಲ, ಅವರಿಗೆ ಒಳ್ಳೆಯ ಸಾಮಾಜಿಕ ಕಾರ್ಯಕರ್ತ ಕೂಡ ಹೌದು. ಅವರು ಈಗ ಪುಟ್ಟ ಮಗುವಿನ ಚಿಕಿತ್ಸೆಗೆ ಸಹಾಯ ಮಾಡುವಂತೆ ಮನವಿ ಮಾಡಿದ್ದಾರೆ. ಅಪರೂಪದ ಕಾಯಿಲೆ ಇರುವ ಬಾಲಕಿಯ ಚಿಕಿತ್ಸೆಗೆ ಬರೋಬ್ಬರಿ 16 ಕೋಟಿ ರೂಪಾಯಿಯ ಅಗತ್ಯವಿದೆ. ಈ ಬಗ್ಗೆ ವಿಡಿಯೋ ಮಾಡಿರೋ ಅವರು, ಕೈಲಾದಷ್ಟು ಸಹಾಯ ಮಾಡಿ ಎಂದು ಕೋರಿಕೊಂಡಿದ್ದಾರೆ. ಸುದೀಪ್ ಕೂಡ ಸಹಾಯ ಮಾಡಿರೋದಾಗಿ ಹೇಳಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More