ದುಡ್ಡು ಕೊಟ್ಟು ‘ಜೈ’ ಸಿನಿಮಾ ಮೊದಲ ಟಿಕೆಟ್ ಖರೀದಿಸಿದ ಸುದೀಪ್

Updated on: Nov 14, 2025 | 10:48 AM

‘ಬಿಗ್ ಬಾಸ್ ಕನ್ನಡ ಸೀಸನ್ 9’ರ ವಿನ್ನರ್ ಹೊರ ಹೊಮ್ಮಿದವರು ರೂಪೇಶ್ ಶೆಟ್ಟಿ. ಅವರು ಈಗ ತುಳು ಹಾಗೂ ಕನ್ನಡ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಈ ಸಿನಿಮಾದ ಮೊದಲ ಟಿಕೆಟ್​ನ ಸುದೀಪ್ ಅವರು ಖರೀದಿ ಮಾಡಿದ್ದಾರೆ ಎಂಬುದು ವಿಶೇಷ. ಆ ಬಗ್ಗೆ ಇಲ್ಲಿದೆ ವಿವರ.

ಸುದೀಪ್ ಅವರು ಹಲವು ಹೊಸ ಮುಖಗಳಿಗೆ ಬೆಂಬಲ ನೀಡುತ್ತಾ ಬರುತ್ತಿದ್ದಾರೆ. ಈಗ ಅವರು ‘ಜೈ’ ಸಿನಿಮಾ ನಿರ್ದೇಶನ ಮಾಡಿದ ರೂಪೇಶ್ ಶೆಟ್ಟಿಯ ಬೆಂಬಲಕ್ಕೆ ನಿಂತಿದ್ದಾರೆ. ಈ ಚಿತ್ರದ ಮೊದಲ ಟಿಕೆಟ್​ನ ಸುದೀಪ್ ಅವರು 501 ರೂಪಾಯಿ ನೀಡಿ ಖರೀದಿ ಮಾಡಿದರು. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ರೂಪೇಶ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ವಿನ್ನರ್ ಕೂಡ ಹೌದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More