‘ಈ ಮನೆಯಲ್ಲಿ ವುಮನ್ ಕಾರ್ಡ್ ಬೇಡ’; ಅಶ್ವಿನಿಗೆ ಬೆವರಿಳಿಸಿದ ಸುದೀಪ್

Updated on: Nov 22, 2025 | 8:39 AM

ಬಿಗ್ ಬಾಸ್ ಮನೆಯಲ್ಲಿ ಅಶ್ವಿನಿ ಅವರು ವುಮನ್ ಕಾರ್ಡ್ ಬಳಕೆ ಮಾಡಿದ್ದು ಸ್ಪಷ್ಟವಾಗುತ್ತಿದೆ. ಈಗ ಸುದೀಪ್ ಅವರು ಈ ವಿಷಯದ ಬಗ್ಗೆ ಮಾತನಾಡಿದ್ದಾರೆ. ಎಲ್ಲರನ್ನೂ ಏಕವಚನದಲ್ಲಿ ಮಾತನಾಡೋ ಅವರು, ಗೌರವ ಕೊಡೋದಿಲ್ಲ ಎಂಬ ಮಾತಿದೆ. ಇದನ್ನು ಸುದೀಪ್ ಅವರು ಪ್ರಸ್ತಾಪ ಮಾಡಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿಲ್ಲ ಎಂಬ ಆರೋಪಗಳನ್ನು ಅಶ್ವಿನಿ ಮಾಡುತ್ತಿದ್ದಾರೆ. ಬೇರೆಯವರಿಗೆ ಏಕವಚನದಲ್ಲಿ ಮಾತನಾಡುವ ಅವರು, ತಮಗೆ ಮಾತ್ರ ಗೌರವ ಬೇಕು ಎಂದು ನಿರೀಕ್ಷೆ ಮಾಡುತ್ತಾರೆ. ಈ ಬಗ್ಗೆ ಸುದೀಪ್ ಅವರು ವೀಕೆಂಡ್​ನಲ್ಲಿ ಮಾತನಾಡಿದ್ದಾರೆ. ‘ಗೌರವ ನಿರೀಕ್ಷೆ ಮಾಡುವ ನೀವು ಪ್ರತಿಯೊಬ್ಬರಿಗೂ ಗೌರವ ಕೊಡೋದು ಕಲಿಯಿರಿ. ಈ ಮನೆಯಲ್ಲಿ ವುಮನ್ ಕಾರ್ಡ್ ಪ್ಲೇ ಮಾಡಬೇಡಿ’ ಎಂದು ಸುದೀಪ್ ಎಚ್ಚರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Nov 22, 2025 08:38 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More