ಸುದ್ದಿಗೋಷ್ಠಿಯಲ್ಲಿ ‘ಕೆಡಿ’ ಚಿತ್ರದ ನಾಯಕಿ ರೀಷ್ಮಾ ನಾಣಯ್ಯ ಪರ ನಿಂತ ಕಿಚ್ಚ ಸುದೀಪ್

Updated on: Apr 27, 2026 | 9:21 PM

‘ಕೆಡಿ’ ಸಿನಿಮಾದ ಪ್ರಚಾರ ಕಾರ್ಯ ಭರದಿಂದ ಸಾಗಿದೆ. ಬೆಂಗಳೂರಿನಲ್ಲಿ ಧ್ರುವ ಸರ್ಜಾ, ಕಿಚ್ಚ ಸುದೀಪ್, ಜೋಗಿ ಪ್ರೇಮ್ ಮತ್ತು ಚಿತ್ರದ ನಾಯಕಿ ರೀಷ್ಮಾ ನಾಣಯ್ಯ ಅವರು ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ರೀಷ್ಮಾ ಅವರಿಗೆ ಯಾರೂ ಕೂಡ ಪ್ರಶ್ನೆ ಕೇಳಿಲ್ಲ ಎಂಬುದನ್ನು ಸುದೀಪ್ ಗಮನಿಸಿದರು.

ಬಿಡುಗಡೆಗೆ ಸಜ್ಜಾಗಿರುವ ‘ಕೆಡಿ’ ಸಿನಿಮಾದ (KD Movie) ಪ್ರಚಾರ ಕಾರ್ಯ ಭರದಿಂದ ಸಾಗಿದೆ. ಇಂದು (ಏಪ್ರಿಲ್ 27) ಬೆಂಗಳೂರಿನಲ್ಲಿ ಧ್ರುವ ಸರ್ಜಾ, ಕಿಚ್ಚ ಸುದೀಪ್, ಜೋಗಿ ಪ್ರೇಮ್ ಹಾಗೂ ಚಿತ್ರದ ನಾಯಕಿ ರೀಷ್ಮಾ ನಾಣಯ್ಯ ಅವರು ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ರೀಷ್ಮಾ ಅವರಿಗೆ ಯಾರೂ ಕೂಡ ಪ್ರಶ್ನೆ ಕೇಳಿಲ್ಲ ಎಂಬುದನ್ನು ಸುದೀಪ್ (Kichcha Sudeep) ಗಮನಿಸಿದರು. ‘ನಮ್ಮ ಮಧ್ಯೆ ಒಂದು ಹುಡುಗಿ ಕೂತಿದೆ. ಇಷ್ಟು ಜನರಿಂದ ಅವರಿಗೆ ಒಂದು ಪ್ರಶ್ನೆ ಕೂಡ ಇಲ್ಲವಾ? ಅವರು ಕೂಡ ಕಲಾವಿದೆ. ಈ ಸಿನಿಮಾದಲ್ಲಿ ಕೆಲಸ ಮಾಡಿದ್ದಾರೆ. ಅವರಿಗೆ ಯಾರೂ ಪ್ರಶ್ನೆ ಕೇಳದೇ ಇರುವುದು ನ್ಯಾಯವಲ್ಲ. ಅವರಿಗೆ ನಾನು ಪ್ರಶ್ನೆ ಕೇಳುತ್ತೇನೆ’ ಎಂದು ಕಿಚ್ಚ ಸುದೀಪ್ ಅವರು ನಟಿಯ ಬೆಂಬಲಕ್ಕೆ ನಿಂತರು. ಅವರ ಈ ಬೆಂಬಲಕ್ಕೆ ರೀಷ್ಮಾ ನಾಣಯ್ಯ (Reeshma Nanaiah) ಅವರು ಧನ್ಯವಾದ ತಿಳಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More