ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ

Edited By:

Updated on: Dec 22, 2025 | 8:17 AM

ಕಿಚ್ಚ ಸುದೀಪ್ ಅವರು ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ‘ಮಾರ್ಕ್’ ಸಿನಿಮಾ ಪ್ರಚಾರ ಮಾಡಿದ್ದು ಗೊತ್ತೇ ಇದೆ. ಈ ಸಿನಿಮಾಗಾಗಿ ಸಾಕಷ್ಟು ಅಭಿಮಾನಿಗಳು ನೆರೆದಿದ್ದರು ಮತ್ತು ಈ ವಿಡಿಯೋನ ಸೋಶಿಯಲ್ ಮೀಡಿಯಾ ಮೂಲಕ ವೈರಲ್ ಆಗುತ್ತಾ ಇದೆ. ಸುದೀಪ್ ಅವರು ಹುಬ್ಬಳ್ಳಿ ಮಂದಿಗೆ ಧನ್ಯವಾದ ಹೇಳುವ ಕೆಲಸ ಮಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ಕಿಚ್ಚ ಸುದೀಪ್ ಅವರು ಶನಿವಾರ (ಡಿಸೆಂಬರ್ 20) ಹುಬ್ಬಳ್ಳಿಗೆ ತೆರಳಿದ್ದರು. ಈ ವೇಳೆ ‘ಮಾರ್ಕ್’ ಸಿನಿಮಾದ ಪ್ರೀರಿಲೀಸ್ ಇವೆಂಟ್ ನಡೆದಿದೆ. ಈ ವೇಳೆ ಸಾಕಷ್ಟು ಸಂಖ್ಯೆಯಲ್ಲಿ ಜನರು ನೆರೆದಿದ್ದರು. ಕೊನೆಯಲ್ಲಿ ಸುದೀಪ್ ಅವರು ವಿಡಿಯೋ ಮಾಡಿ ಹುಬ್ಬಳ್ಳಿಯ ಜನತೆಗೆ ಧನ್ಯವಾದ ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸ್ವತಃ ಸುದೀಪ್ ಅವರು ಇದನ್ನು ಹಂಚಿಕೊಂಡಿದ್ದಾರೆ. ಅಭಿಮಾನಿಗಳು ತೋರಿದ ಪ್ರೀತಿಗೆ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More