ಕೆಡಿ ಸಿನಿಮಾ ಸುದ್ದಿಗೋಷ್ಠಿ: ಎಷ್ಟೇ ಕೇಳಿದರೂ ಆ ವಿಷಯ ಬಾಯಿ ಬಿಡಲಿಲ್ಲ ಕಿಚ್ಚ ಸುದೀಪ್

Updated on: Apr 27, 2026 | 10:33 PM

ಕಿಚ್ಚ ಸುದೀಪ್ ‘ಕೆಡಿ’ ಸಿನಿಮಾದಲ್ಲಿ ಕಾಲ ಭೈರವ ಎಂಬ ಅತಿಥಿ ಪಾತ್ರ ಮಾಡಿದ್ದಾರೆ. ಹಾಗಾಗಿ ಈ ಸಿನಿಮಾಗೆ ಸ್ಟಾರ್ ಮೆರುಗು ಹೆಚ್ಚಿದೆ. ಆ ಪಾತ್ರದ ಬಗ್ಗೆ ಹೆಚ್ಚು ತಿಳಿದುಕೊಳ್ಳಲು ಎಲ್ಲರಿಗೂ ಆಸಕ್ತಿ ಇದೆ. ಇಂದು (ಏ.27) ನಡೆದ ಸುದ್ದಿಗೋಷ್ಠಿಯಲ್ಲಿ ಪಾತ್ರದ ಬಗ್ಗೆ ಪ್ರಶ್ನೆ ಎದುರಾಯಿತು.

ನಟ ಕಿಚ್ಚ ಸುದೀಪ್ ಅವರು ‘ಕೆಡಿ’ (KD) ಸಿನಿಮಾದಲ್ಲಿ ಕಾಲ ಭೈರವ ಎಂಬ ಅತಿಥಿ ಪಾತ್ರ ಮಾಡಿದ್ದಾರೆ. ಹಾಗಾಗಿ ಈ ಸಿನಿಮಾಗೆ ಸ್ಟಾರ್ ಮೆರುಗು ಹೆಚ್ಚಿದೆ. ಆ ಪಾತ್ರದ ಬಗ್ಗೆ ಹೆಚ್ಚು ತಿಳಿದುಕೊಳ್ಳಲು ಎಲ್ಲರಿಗೂ ಆಸಕ್ತಿ ಇದೆ. ಇಂದು (ಏಪ್ರಿಲ್ 27) ನಡೆದ ಸುದ್ದಿಗೋಷ್ಠಿಯಲ್ಲಿ ಈ ಪಾತ್ರದ ಬಗ್ಗೆ ಪ್ರಶ್ನೆ ಎದುರಾಯಿತು. ಆದರೆ ಕಿಚ್ಚ ಸುದೀಪ್ ಅವರು ಯಾವುದೇ ಗುಟ್ಟು ಬಿಟ್ಟುಕೊಡಲಿಲ್ಲ. ‘ನನಗೆ ಪಾತ್ರದ ಬಗ್ಗೆ ಗೊತ್ತಿಲ್ಲ. ಪ್ರಮಾಣಿಕವಾಗಿ ಹೇಳುತ್ತೇನೆ. ಪ್ರೇಮ್ ಕರೆದಿದ್ದಕ್ಕೆ ಪಾತ್ರ ಮಾಡಿದ್ದೇನೆ. ನಾನು ಅತಿಥಿ ಪಾತ್ರ ಮಾಡಿದಾಗ ಆ ಸಿನಿಮಾದ ಹೀರೋ ಪಾತ್ರಕ್ಕೆ ತೊಂದರೆ ಮಾಡಬಾರದು. ಅಷ್ಟು ಮಾತ್ರ ಕಾಳಜಿ ವಹಿಸುತ್ತೇನೆ. ಮೂರು ದಿನದ ಶೂಟಿಂಗ್ ಬಗ್ಗೆ ಕೇಳಿದರೆ ಮಾತ್ರ ಹೇಳುತ್ತೇನೆ. ಅದನ್ನು ಹೊರತುಪಡಿಸಿ ಬೇರೆ ಏನೂ ನನಗೆ ಗೊತ್ತಿಲ್ಲ’ ಎಂದು ಕಿಚ್ಚ ಸುದೀಪ್ (Kichcha Sudeep) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More