ಬೊಮ್ಮಾಯಿಗೆ ಮಾಮ ಅಂತ ಸುದೀಪ್​ ಕರೆಯೋದು ಯಾಕೆ? ಇಲ್ಲಿದೆ ಕಿಚ್ಚ ನೀಡಿದ ವಿವರಣೆ

Updated on: Apr 05, 2023 | 4:36 PM

Kichcha Sudeep: ಅನೇಕ ಸಂದರ್ಭಗಳಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ‘ಮಾಮ’ ಎಂದು ಸುದೀಪ್​ ಕರೆದಿದ್ದುಂಟು. ಆ ಬಗ್ಗೆ ಕಿಚ್ಚ ಸ್ಪಷ್ಟನೆ ನೀಡಿದ್ದಾರೆ.

ಬಸವರಾಜ ಬೊಮ್ಮಾಯಿ ಮತ್ತು ಕಿಚ್ಚ ಸುದೀಪ್​ (Kichcha Sudeep) ಅವರ ಇಂದು (ಏಪ್ರಿಲ್​ 5) ಜೊತೆಯಾಗಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಪ್ರೆಸ್​ಮೀಟ್​ ಆರಂಭ ಆಗುತ್ತಿದ್ದಂತೆಯೇ ಸುದೀಪ್​ ಅವರು ಒಂದು ವಿಷಯದ ಬಗ್ಗೆ ಸ್ಪಷ್ಟನೆ ನೀಡಿದರು. ಅನೇಕ ಸಂದರ್ಭಗಳಲ್ಲಿ ಬಸವರಾಜ ಬೊಮ್ಮಾಯಿ (Basavaraj Bommai) ಅವರನ್ನು ‘ಮಾಮ’ ಎಂದು ಸುದೀಪ್​ ಕರೆದಿದ್ದುಂಟು. ಆ ಬಗ್ಗೆ ಕಿಚ್ಚ ಮಾತನಾಡಿದರು. ‘ತಪ್ಪು ತಿಳಿಯಬೇಡಿ. ಇವರು ನಮಗೆ ಮಾನ್ಯ ಮುಖ್ಯಮಂತ್ರಿಗಳು. ಆದರೆ ನಾನು ಚಿಕ್ಕ ವಯಸ್ಸಿನಿಂದ ನೋಡಿಕೊಂಡು ಬಂದಿದ್ದರಿಂದ ಅವರನ್ನು ಮಾಮ ಅಂತಾನೇ ಕರೆಯುವುದು. ಈಗಲೂ ನಾನು ಅವರನ್ನು ಗೌರವದಿಂದ ಹಾಗೆಯೇ ಕರೆಯುತ್ತೇನೆ. ದಯವಿಟ್ಟು ಬೇರೆ ರೀತಿ ತೆಗೆದುಕೊಳ್ಳಬೇಡಿ’ ಎಂದು ಸುದೀಪ್​ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published on: Apr 05, 2023 04:36 PM
Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More