ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಅಭಿಮಾನಿಗಳು
ಕಿಚ್ಚ ಸುದೀಪ್ ಅವರು ಪತ್ನಿ ಪ್ರಿಯಾ ಜೊತೆ ಇಂದು (ಫೆ.28) ಚಾಮುಂಡೇಶ್ವರಿ ದೇವಸ್ಥಾನಕ್ಕೆ ಬಂದಿದ್ದಾರೆ. ಕರ್ನಾಟಕ ಬುಲ್ಡೋಜರ್ಸ್ ತಂಡದ ಆಟಗಾರರು ಕೂಡ ಸಾಥ್ ನೀಡಿದ್ದಾರೆ. ಈ ವೇಳೆ ಸುದೀಪ್ ಜೊತೆ ಫೋಟೋಗಾಗಿ ಫ್ಯಾನ್ಸ್ ಮುತ್ತಿಕೊಂಡಿದ್ದಾರೆ. ದೇವರಿಗೆ ಕಿಚ್ಚ ಸುದೀಪ್ ಅವರು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ನಟ ಕಿಚ್ಚ ಸುದೀಪ್ ಅವರು ಹೋದಲ್ಲಿ ಜನಸಾಗರ ಸೇರುತ್ತದೆ. ಇಂದು (ಫೆಬ್ರವರಿ 28) ಅವರು ಚಾಮುಂಡಿ ಬೆಟ್ಟಕ್ಕೆ ಬಂದಿದ್ದಾರೆ. ಚಾಮುಂಡೇಶ್ವರಿ ದೇವಸ್ಥಾನದ ಒಳಗೆ ಸುದೀಪ್ ಅವರ ಜೊತೆ ಸೆಲ್ಫಿ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಜನರನ್ನು ನಿಯಂತ್ರಿಸಲು ಕಷ್ಟಪಡಬೇಕಾಯಿತು. ಸುದೀಪ್ ಅವರಿಗೆ ಫ್ಯಾನ್ಸ್ ಜೈಕಾರ ಹಾಕಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ..
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.