ಕಾಂಗ್ರೆಸ್​ ಸೇರಿದ ಗೀತಾ ಶಿವರಾಜ್​ಕುಮಾರ್​ ಬಗ್ಗೆ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್

Updated on: Apr 28, 2023 | 5:43 PM

ಗೀತಾ ಶಿವರಾಜ್​ಕುಮಾರ್​ ಬಗ್ಗೆ ಸುದೀಪ್ ಅವರಿಗೆ ತುಂಬ ಗೌರವ ಇದೆ. ಆದರೆ ರಾಜಕೀಯದಲ್ಲಿ ಅವರಿಬ್ಬರು ಬೇರೆ ಬೇರೆ ಪಕ್ಷಗಳ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆಯ (Karnataka Assembly Elections 2023) ಪ್ರಚಾರದಲ್ಲಿ ಚಂದನವನದ ಸೆಲೆಬ್ರಿಟಿಗಳು ತೊಡಗಿಕೊಂಡಿದ್ದಾರೆ. ಕಿಚ್ಚ ಸುದೀಪ್​ (Kichcha Sudeep) ಅವರು ಬಿಜೆಪಿ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಇದರ ಬೆನ್ನಲ್ಲೇ ಗೀತಾ ಶಿವರಾಜ್​ಕುಮಾರ್​ ಅವರು ಕಾಂಗ್ರೆಸ್​ ಸೇರ್ಪಡೆ ಆಗಿದ್ದಾರೆ. ಗೀತಾ ಶಿವರಾಜ್​ಕುಮಾರ್​ (Geetha Shivarajkumar) ಬಗ್ಗೆ ಸುದೀಪ್ ಅವರಿಗೆ ತುಂಬ ಗೌರವ ಇದೆ. ಆದರೆ ರಾಜಕೀಯದಲ್ಲಿ ಅವರಿಬ್ಬರು ಬೇರೆ ಬೇರೆ ಪಕ್ಷಗಳ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಗೀತಕ್ಕ ಕಾಂಗ್ರೆಸ್​ ಸೇರಿರುವ ಬಗ್ಗೆ ಇದೇ ಮೊದಲ ಬಾರಿಗೆ ಕಿಚ್ಚ ಸುದೀಪ್​ ಅವರು ನೀಡಿದ ಪ್ರತಿಕ್ರಿಯೆ ಇಲ್ಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published on: Apr 28, 2023 02:49 PM
Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More