Kichcha Sudeep: ‘ಕನ್ನಡದ ಧ್ವಜ ಯಾವಾಗ್ಲೂ ಮೇಲಿರಬೇಕು’: ಚೆನ್ನೈ ವಿರುದ್ಧ ಗೆದ್ದ ಖುಷಿಯಲ್ಲಿ ಸುದೀಪ್ ಮಾತು
Karnataka Bulldozers | CCL: ಕರ್ನಾಟಕ ಬುಲ್ಡೋಜರ್ಸ್ ತಂಡವು ಚೆನ್ನೈ ರೈನೋಸ್ ವಿರುದ್ಧ ಜಯಭೇರಿ ಬಾರಿಸಿತು. ಆ ಖುಷಿಯಲ್ಲಿ ಕಿಚ್ಚ ಸುದೀಪ್ ಅವರು ಕರುನಾಡ ಬಾವುಟ ಹಿಡಿದು ಸಂಭ್ರಮಿಸಿದರು.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ (ಮಾ.4) ಚೆನ್ನೈ ರೈನೋಸ್ (Chennai Rhinos) ಮತ್ತು ಕರ್ನಾಟಕ ಬುಲ್ಡೋಜರ್ಸ್ ತಂಡಗಳ ನಡುವೆ ರೋಚಕ ಪಂದ್ಯ ನಡೆಯಿತು. ಸೆಲೆಬ್ರಿಟಿ ಕ್ರಿಕೆಟ್ ಲೀಗ್ ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಕ್ರೀಡಾಂಗಣದಲ್ಲಿ ಜಮಾಯಿಸಿದ್ದರು. ತವರಿನಲ್ಲಿ ಕರ್ನಾಟಕ ಬುಲ್ಡೋಜರ್ಸ್ (Karnataka Bulldozers) ತಂಡ ಜಯಭೇರಿ ಬಾರಿಸಿತು. ಪಂದ್ಯ ಗೆದ್ದ ಖುಷಿಯಲ್ಲಿ ಕಿಚ್ಚ ಸುದೀಪ್ (Kichcha Sudeep) ಅವರು ಟಿವಿ9 ಜೊತೆ ಮಾತನಾಡಿದರು. ‘ಕನ್ನಡದ ಬಾವುಟ ಯಾವಾಗಲೂ ಮೇಲಿರಬೇಕು’ ಎಂದು ಅವರು ಹೆಮ್ಮೆಯಿಂದ ಹೇಳಿದರು. ತಮ್ಮ ತಂಡಕ್ಕೆ ಬೆಂಬಲ ನೀಡಿದ ಕ್ರಿಕೆಟ್ಪ್ರೇಮಿಗಳಿಗೆ ಹಾಗೂ ಅಭಿಮಾನಿಗಳಿಗೆ ಸುದೀಪ್ ಅವರು ಧನ್ಯವಾದ ಅರ್ಪಿಸಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Mar 05, 2023 04:08 PM