ಹಣದ ಆಸೆಗೆ ಟ್ರೋಫಿ ತ್ಯಾಗ? ಬಿಗ್ ಬಾಸ್ ಮನೆಗೆ ಬಂತು ಸೂಟ್ ಕೇಸ್ ತುಂಬ ದುಡ್ಡು
‘ಬಿಗ್ ಬಾಸ್ ಕನ್ನಡ ಸೀಸನ್ 11’ ರಿಯಾಲಿಟಿ ಶೋನಲ್ಲಿ ಫೈನಲಿಸ್ಟ್ಗಳಾಗಿ ಉಗ್ರಂ ಮಂಜು, ತ್ರಿವಿಕ್ರಮ್, ಭವ್ಯಾ ಗೌಡ, ಹನುಮಂತ, ಮೋಕ್ಷಿತಾ ಪೈ ಇದ್ದಾರೆ. ಟ್ರೋಫಿ ಯಾರಿಗೆ ಸಿಗಲಿದೆ ಎಂಬುದನ್ನು ತಿಳಿಯಲು ಕ್ಷಣಗಣನೆ ಆರಂಭ ಆಗಿದೆ. ಈ ಹೊತ್ತಿನಲ್ಲಿ ಕಿಚ್ಚ ಸುದೀಪ್ ಅವರು ಒಂದು ದೊಡ್ಡ ಟ್ವಿಸ್ಟ್ ಕೊಟ್ಟಿದ್ದಾರೆ. ಅದರ ಪ್ರೋಮೋ ಇಲ್ಲಿದೆ.
ಬಿಗ್ ಬಾಸ್ ಫಿನಾಲೆಯಲ್ಲಿ ದೊಡ್ಡ ಟ್ವಿಸ್ಟ್ ನೀಡಲಾಗಿದೆ. 20 ಲಕ್ಷ ಹಣ ಬೇಕಿದ್ದರೆ ಟ್ರೋಫಿ ತ್ಯಾಗ ಮಾಡಿ, ಆಟವನ್ನು ಅರ್ಧಕ್ಕೆ ನಿಲ್ಲಿಸಬಹುದು ಎಂದು ಆಫರ್ ಕೊಡಲಾಗಿದೆ. ಕಿಚ್ಚ ಸುದೀಪ್ ಅವರು ಫೈನಲಿಸ್ಟ್ಗಳಿಗೆ ಈ ವಿಷಯ ತಿಳಿಸಿದಾಗ ಎಲ್ಲರಿಗೂ ಅಚ್ಚರಿ ಆಗಿದೆ. ಈ ಅವಕಾಶವನ್ನು ಯಾರಾದರೂ ಒಪ್ಪಿಕೊಳ್ಳುತ್ತಾರಾ ಎಂಬ ಕೌತುಕ ಮೂಡಿದೆ. ಅದಕ್ಕೆ ಉತ್ತರ ಫಿನಾಲೆ ಎಪಿಸೋಡ್ನಲ್ಲಿ ಸಿಗಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos