ಹಣದ ಆಸೆಗೆ ಟ್ರೋಫಿ ತ್ಯಾಗ? ಬಿಗ್ ಬಾಸ್ ಮನೆಗೆ ಬಂತು ಸೂಟ್​ ಕೇಸ್​ ತುಂಬ ದುಡ್ಡು

Updated on: Jan 26, 2025 | 6:17 PM

‘ಬಿಗ್ ಬಾಸ್ ಕನ್ನಡ ಸೀಸನ್​ 11’ ರಿಯಾಲಿಟಿ ಶೋನಲ್ಲಿ ಫೈನಲಿಸ್ಟ್​ಗಳಾಗಿ ಉಗ್ರಂ ಮಂಜು, ತ್ರಿವಿಕ್ರಮ್, ಭವ್ಯಾ ಗೌಡ, ಹನುಮಂತ, ಮೋಕ್ಷಿತಾ ಪೈ ಇದ್ದಾರೆ. ಟ್ರೋಫಿ ಯಾರಿಗೆ ಸಿಗಲಿದೆ ಎಂಬುದನ್ನು ತಿಳಿಯಲು ಕ್ಷಣಗಣನೆ ಆರಂಭ ಆಗಿದೆ. ಈ ಹೊತ್ತಿನಲ್ಲಿ ಕಿಚ್ಚ ಸುದೀಪ್ ಅವರು ಒಂದು ದೊಡ್ಡ ಟ್ವಿಸ್ಟ್ ಕೊಟ್ಟಿದ್ದಾರೆ. ಅದರ ಪ್ರೋಮೋ ಇಲ್ಲಿದೆ.

ಬಿಗ್ ಬಾಸ್ ಫಿನಾಲೆಯಲ್ಲಿ ದೊಡ್ಡ ಟ್ವಿಸ್ಟ್ ನೀಡಲಾಗಿದೆ. 20 ಲಕ್ಷ ಹಣ ಬೇಕಿದ್ದರೆ ಟ್ರೋಫಿ ತ್ಯಾಗ ಮಾಡಿ, ಆಟವನ್ನು ಅರ್ಧಕ್ಕೆ ನಿಲ್ಲಿಸಬಹುದು ಎಂದು ಆಫರ್​ ಕೊಡಲಾಗಿದೆ. ಕಿಚ್ಚ ಸುದೀಪ್ ಅವರು ಫೈನಲಿಸ್ಟ್​ಗಳಿಗೆ ಈ ವಿಷಯ ತಿಳಿಸಿದಾಗ ಎಲ್ಲರಿಗೂ ಅಚ್ಚರಿ ಆಗಿದೆ. ಈ ಅವಕಾಶವನ್ನು ಯಾರಾದರೂ ಒಪ್ಪಿಕೊಳ್ಳುತ್ತಾರಾ ಎಂಬ ಕೌತುಕ ಮೂಡಿದೆ. ಅದಕ್ಕೆ ಉತ್ತರ ಫಿನಾಲೆ ಎಪಿಸೋಡ್​ನಲ್ಲಿ ಸಿಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More