ಸ್ಪರ್ಧಿಗಳ ಪಟ್ಟಿ ಸುದೀಪ್​ಗೆ ಸಿಗೋದು ಯಾವಾಗ? ಉತ್ತರಿಸಿದ ಕಿಚ್ಚ

Updated on: Sep 24, 2024 | 11:04 AM

‘ಬಿಗ್ ಬಾಸ್ ಕನ್ನಡ ಸೀಸನ್ 11’ಕ್ಕೆ ಸುದೀಪ್ ಅವರೇ ನಿರೂಪಕರಾಗಿದ್ದಾರೆ. ಅವರು ಈ ಶೋನ ಭಾಗ ಆಗುವುದಿಲ್ಲ ಎನ್ನುವ ಸುದ್ದಿ ಹರಿದಾಡಿತ್ತು. ಸುದೀಪ್ ಅವರು ಒಂದು ಅಚ್ಚರಿಯ ವಿಚಾರ ರಿವೀಲ್ ಮಾಡಿದ್ದಾರೆ.

ಕಿಚ್ಚ ಸುದೀಪ್​ಗೆ ‘ಬಿಗ್ ಬಾಸ್ ಕನ್ನಡ’ ಬಗ್ಗೆ ಪ್ರತಿ ಮಾಹಿತಿಯೂ ಇರುತ್ತದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಸುದೀಪ್ ಅವರು ಉದ್ದೇಶ ಪೂರ್ವಕವಾಗಿಯೇ ಕೆಲವು ಮಾಹಿತಿಗಳನ್ನು ಪಡೆದುಕೊಳ್ಳುವುದಿಲ್ಲವಂತೆ. ಈ ಬಗ್ಗೆ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ‘ಶೂಟಿಂಗ್ ದಿನದ ತನಕ ನನಗೆ ಸ್ಪರ್ಧಿಗಳ ಬಗ್ಗೆ ಮಾಹಿತಿ ನೀಡಬೇಡಿ ಎಂದು ಹೇಳುತ್ತೇನೆ. ಲೀಕ್ ಆದ್ರೆ ಅದು ನನ್ನಿಂದ ಅಂದುಕೊಳ್ಳೋದು ಬೇಡ’ ಎಂದಿದ್ದಾರೆ ಸುದೀಪ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More