ಒಂದೇ ವೇದಿಕೆ ಮೇಲೆ ಸುದೀಪ್​, ರಣವೀರ್​, ಕಪಿಲ್​ ದೇವ್​; ‘83’ ಸುದ್ದಿಗೋಷ್ಠಿ ನೋಡಲು ಇಲ್ಲಿ ಕ್ಲಿಕ್​ ಮಾಡಿ

ಕಿಚ್ಚ ಸುದೀಪ್​ ಅವರು ಕೂಡ ಈಗ ಈ ಚಿತ್ರತಂಡಕ್ಕೆ ಸಾಥ್​ ನೀಡಿದ್ದಾರೆ. ಅಂದರೆ, ಕನ್ನಡದಲ್ಲಿ ‘83’ ಸಿನಿಮಾವನ್ನು ಸುದೀಪ್​ ಅರ್ಪಿಸುತ್ತಿದ್ದಾರೆ. ಈ ಚಿತ್ರದ ಸುದ್ದಿಗೋಷ್ಠಿ ಇಂದು (ಡಿಸೆಂಬರ್​ 18) ಬೆಂಗಳೂರಿನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಸುದೀಪ್​, ರಣವೀರ್​ ಸಿಂಗ್​, ಕ್ರಿಕೆಟ್​ ದಿಗ್ಗಜ ಕಪಿಲ್​ ದೇವ್​ ಇದ್ದರು.

TV9kannada Web Team

| Edited By: Rajesh Duggumane

Dec 18, 2021 | 7:31 PM

1983ರಲ್ಲಿ ಭಾರತೀಯ ಕ್ರಿಕೆಟ್​ ತಂಡ ವಿಶ್ವಕಪ್​ ಗೆದ್ದ ಘಟನೆಯನ್ನು ಆಧರಿಸಿ ‘83’ (83 Movie) ಸಿನಿಮಾ ಸಿದ್ಧಗೊಂಡಿದೆ. ಅದನ್ನು ಕರ್ನಾಟಕದಲ್ಲಿ ಸುದೀಪ್​ ಪ್ರಸ್ತುತಪಡಿಸುತ್ತಿದ್ದಾರೆ. ಈ ಚಿತ್ರವನ್ನು ಕಣ್ತುಂಬಿಕೊಳ್ಳಲು ಸಿನಿಪ್ರಿಯರು ಹಲವು ತಿಂಗಳಿಂದ ಕಾಯುತ್ತಿದ್ದರು. ಮೊದಲ ಲಾಕ್​ಡೌನ್​ ಶುರುವಾಗುವುದಕ್ಕೂ ಮುನ್ನವೇ ಈ ಸಿನಿಮಾ ರಿಲೀಸ್​ಗೆ ಸಿದ್ಧವಾಗಿತ್ತು. ಆದರೆ ಲಾಕ್​ಡೌನ್​ ಜಾರಿಯಾದ ಬಳಿಕ ಬಿಡುಗಡೆ ದಿನಾಂಕ ಮುಂದೂಡಿಕೊಳ್ಳುವುದು ಅನಿವಾರ್ಯ ಆಗಿತ್ತು. ರಣವೀರ್​ ಸಿಂಗ್​ ನಟನೆಯ ಈ ಚಿತ್ರ ಈಗ ಎಲ್ಲ ವಿಘ್ನಗಳನ್ನು ನಿವಾರಿಸಿಕೊಂಡು ಡಿ.24ರಂದು ತೆರೆ ಕಾಣಲಿದೆ. ಕಿಚ್ಚ ಸುದೀಪ್​ ಅವರು ಕೂಡ ಈಗ ಈ ಚಿತ್ರತಂಡಕ್ಕೆ ಸಾಥ್​ ನೀಡಿದ್ದಾರೆ. ಅಂದರೆ, ಕನ್ನಡದಲ್ಲಿ ‘83’ ಸಿನಿಮಾವನ್ನು ಸುದೀಪ್​ ಅರ್ಪಿಸುತ್ತಿದ್ದಾರೆ. ಈ ಚಿತ್ರದ ಸುದ್ದಿಗೋಷ್ಠಿ ಇಂದು (ಡಿಸೆಂಬರ್​ 18) ಬೆಂಗಳೂರಿನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಸುದೀಪ್​, ರಣವೀರ್​ ಸಿಂಗ್​, ಕ್ರಿಕೆಟ್​ ದಿಗ್ಗಜ ಕಪಿಲ್​ ದೇವ್​ ಇದ್ದರು.

ಇದನ್ನೂ ಓದಿ: ಸುದೀಪ್​ ಬಗ್ಗೆ ರಣವೀರ್​ ಸಿಂಗ್​ ಪ್ರೀತಿಯ ಮಾತು; ‘83’ ಚಿತ್ರಕ್ಕೆ ಸ್ಟಾರ್​ ನಟರ ಕಾತರ

 

Follow us on

Click on your DTH Provider to Add TV9 Kannada