ಕನಕಪುರ ಶ್ರೀನಿವಾಸ್ ಅಶ್ಲೀಲ ಮಾತಿಗೆ ಕಿಚ್ಚ ಸುದೀಪ್ ಖಡಕ್ ರಿಯಾಕ್ಷನ್
ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರು ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಹಲವರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದರು. ಡಿಕೆ ಶಿವಕುಮಾರ್, ಧ್ರುವ ಸರ್ಜಾ, ಎ.ಪಿ. ಅರ್ಜುನ್, ಜೋಗಿ ಪ್ರೇಮ್ ಸೇರಿದಂತೆ ಹಲವರ ವಿರುದ್ಧ ಅವರು ಅಶ್ಲೀಲವಾಗಿ ಮಾತನಾಡಿದ್ದರು. ಆ ಬಗ್ಗೆ ಸುದೀಪ್ ನೀಡಿದ ಪ್ರತಿಕ್ರಿಯೆ ಇಲ್ಲಿದೆ..
ನಿರ್ಮಾಪಕ ಕನಕಪುರ ಶ್ರೀನಿವಾಸ್ (Kanakapura Srinivas) ಅವರು ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಅನೇಕರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದರು. ಡಿಕೆ ಶಿವಕುಮಾರ್, ಧ್ರುವ ಸರ್ಜಾ, ಎ.ಪಿ. ಅರ್ಜುನ್, ಜೋಗಿ ಪ್ರೇಮ್, ಪುನೀತ್ ರಾಜ್ಕುಮಾರ್ ಸೇರಿದಂತೆ ಹಲವರ ವಿರುದ್ಧ ಅವರು ಅಶ್ಲೀಲವಾಗಿ ಮಾತನಾಡಿದ್ದರು. ಅದಕ್ಕೆ ಚಿತ್ರರಂಗದಲ್ಲಿ ಖಂಡನೆ ವ್ಯಕ್ತವಾಗಿದೆ. ಸಿಸಿಎಲ್ ಗೆಲುವಿನ ಸುದ್ದಿಗೋಷ್ಠಿಯಲ್ಲಿ ಕಿಚ್ಚ ಸುದೀಪ್ (Kichcha Sudeep) ಅವರಿಗೆ ಈ ಬಗ್ಗೆ ಪ್ರಶ್ನೆ ಕೇಳಲಾಯಿತು. ತಮ್ಮದೇ ರೀತಿಯಲ್ಲಿ ಅವರು ಉತ್ತರ ನೀಡಿದ್ದಾರೆ. ‘ಇದು ಸಿಸಿಎಲ್ ಸುದ್ದಿಗೋಷ್ಠಿ. ಸಿಹಿ ತಿನ್ನುವ ಸಂದರ್ಭ. ಈ ವೇಳೆ ಮೆಣಸಿನಕಾಯಿ ಯಾಕೆ? ನಾವು ಕಪ್ ಗೆಲ್ಲಲು 12 ವರ್ಷ ಕಾದಿದ್ದೇವೆ. ನಮ್ಮ ಉತ್ತರಕ್ಕಾಗಿ ನೀವು ಕೂಡ ಸ್ವಲ್ಪ ಕಾಯಿರಿ. ಇನ್ನೊಂದು ವೇದಿಕೆ ಹತ್ತುತ್ತೇನೆ. ಆಗ ಮಾತನಾಡುತ್ತೇನೆ. ಈಗ ಲಾಡು ತಿನ್ನುವ ಸಮಯ, ಮೆಣಸಿನಕಾಯಿ ಅಲ್ಲ. ಇದು 30 ವರ್ಷದ ಅನುಭವದ ಮಾತು’ ಎಂದು ಕಿಚ್ಚ ಸುದೀಪ್ ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ

