ಕನಕಪುರ ಶ್ರೀನಿವಾಸ್ ಅಶ್ಲೀಲ ಮಾತಿಗೆ ಕಿಚ್ಚ ಸುದೀಪ್ ಖಡಕ್ ರಿಯಾಕ್ಷನ್

Updated on: Feb 08, 2026 | 9:04 AM

ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರು ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಹಲವರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದರು. ಡಿಕೆ ಶಿವಕುಮಾರ್, ಧ್ರುವ ಸರ್ಜಾ, ಎ.ಪಿ. ಅರ್ಜುನ್, ಜೋಗಿ ಪ್ರೇಮ್ ಸೇರಿದಂತೆ ಹಲವರ ವಿರುದ್ಧ ಅವರು ಅಶ್ಲೀಲವಾಗಿ ಮಾತನಾಡಿದ್ದರು. ಆ ಬಗ್ಗೆ ಸುದೀಪ್ ನೀಡಿದ ಪ್ರತಿಕ್ರಿಯೆ ಇಲ್ಲಿದೆ..

ನಿರ್ಮಾಪಕ ಕನಕಪುರ ಶ್ರೀನಿವಾಸ್ (Kanakapura Srinivas) ಅವರು ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಅನೇಕರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದರು. ಡಿಕೆ ಶಿವಕುಮಾರ್, ಧ್ರುವ ಸರ್ಜಾ, ಎ.ಪಿ. ಅರ್ಜುನ್, ಜೋಗಿ ಪ್ರೇಮ್, ಪುನೀತ್ ರಾಜ್​ಕುಮಾರ್ ಸೇರಿದಂತೆ ಹಲವರ ವಿರುದ್ಧ ಅವರು ಅಶ್ಲೀಲವಾಗಿ ಮಾತನಾಡಿದ್ದರು. ಅದಕ್ಕೆ ಚಿತ್ರರಂಗದಲ್ಲಿ ಖಂಡನೆ ವ್ಯಕ್ತವಾಗಿದೆ. ಸಿಸಿಎಲ್ ಗೆಲುವಿನ ಸುದ್ದಿಗೋಷ್ಠಿಯಲ್ಲಿ ಕಿಚ್ಚ ಸುದೀಪ್ (Kichcha Sudeep) ಅವರಿಗೆ ಈ ಬಗ್ಗೆ ಪ್ರಶ್ನೆ ಕೇಳಲಾಯಿತು. ತಮ್ಮದೇ ರೀತಿಯಲ್ಲಿ ಅವರು ಉತ್ತರ ನೀಡಿದ್ದಾರೆ. ‘ಇದು ಸಿಸಿಎಲ್ ಸುದ್ದಿಗೋಷ್ಠಿ. ಸಿಹಿ ತಿನ್ನುವ ಸಂದರ್ಭ. ಈ ವೇಳೆ ಮೆಣಸಿನಕಾಯಿ ಯಾಕೆ? ನಾವು ಕಪ್ ಗೆಲ್ಲಲು 12 ವರ್ಷ ಕಾದಿದ್ದೇವೆ. ನಮ್ಮ ಉತ್ತರಕ್ಕಾಗಿ ನೀವು ಕೂಡ ಸ್ವಲ್ಪ ಕಾಯಿರಿ. ಇನ್ನೊಂದು ವೇದಿಕೆ ಹತ್ತುತ್ತೇನೆ. ಆಗ ಮಾತನಾಡುತ್ತೇನೆ. ಈಗ ಲಾಡು ತಿನ್ನುವ ಸಮಯ, ಮೆಣಸಿನಕಾಯಿ ಅಲ್ಲ. ಇದು 30 ವರ್ಷದ ಅನುಭವದ ಮಾತು’ ಎಂದು ಕಿಚ್ಚ ಸುದೀಪ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More