Ramya: ‘ರಮ್ಯಾ ಎಂದಿಗೂ ಆ ರೀತಿ ಮಾಡಲ್ಲ ಅನ್ನೋದು ಗೊತ್ತು’: ಸುದೀಪ್

Updated on: Apr 28, 2023 | 11:29 AM

ಇತ್ತೀಚೆಗೆ ಮಾತನಾಡಿದ್ದ ರಮ್ಯಾ ಅವರು, ಸುದೀಪ್ ರಾಜಕೀಯಕ್ಕೆ ಬರಬೇಕು ಎಂದಿದ್ದರು. ಈ ಬಗ್ಗೆ ಸುದೀಪ್ ಪ್ರತಿಕ್ರಿಯೆ ನೀಡಿದ್ದಾರೆ.

ಕಿಚ್ಚ ಸುದೀಪ್ ಹಾಗೂ ರಮ್ಯಾ ಕೆಲ ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದ್ದಾರೆ. ಹೀಗಾಗಿ, ಇವರ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಬೆಳೆದಿದೆ. ರಾಜಕೀಯದಲ್ಲಿ ಇಬ್ಬರ ನಿಲುವು ಬೇರೆ ಬೇರೆ ಇದ್ದರೂ ಅದು ಫ್ರೆಂಡ್​ಶಿಪ್ ಮೇಲೆ ಯಾವುದೇ ಪ್ರಭಾವ ಬೀರಿಲ್ಲ. ಇತ್ತೀಚೆಗೆ ಮಾತನಾಡಿದ್ದ ರಮ್ಯಾ ಅವರು, ಸುದೀಪ್ (Sudeep) ರಾಜಕೀಯಕ್ಕೆ ಬರಬೇಕು ಎಂದಿದ್ದರು. ಈ ಬಗ್ಗೆ ಸುದೀಪ್ ಪ್ರತಿಕ್ರಿಯೆ ನೀಡಿದ್ದಾರೆ. ‘ರಮ್ಯಾ ನನಗೆ ಯಾವಾಗಲೂ ಒಳ್ಳೆಯದನ್ನೇ ಬಯಸುತ್ತಾರೆ. ಉತ್ತಮ ಗೆಳತಿ. ಬೇರೆ ಪಕ್ಷದ ಪರ ಪ್ರಚಾರ ಮಾಡುತ್ತೇನೆ ಎಂದಾಗ ಕೊಂಕು ತೆಗೆದು ಸ್ಟೇಟ್​ಮೆಂಟ್ ಕೊಡೋದು ಸಹಜ. ಆದರೆ, ರಮ್ಯಾ (Ramya) ಎಂದಿಗೂ ಆ ರೀತಿ ಮಾಡಲ್ಲ ಅನ್ನೋದು ಗೊತ್ತು’ ಎಂದಿದ್ದಾರೆ ಸುದೀಪ್.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Apr 28, 2023 11:28 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More